ಮಡಿಕೇರಿ ಡಿ.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ ಮತ್ತು ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ‘ಸಾಮಾಜಿಕ ಪ್ರಗತಿ ಸಾಧಿಸಲು ವಿಶೇಷ ಚೇತನರನ್ನು ಒಳಗೊಂಡ ಸಮಾಜ ರೂಪಿಸುವುದು’ ಎಂಬ ಘೋಷವಾಕ್ಯದೊಂದಿಗೆ ಡಿ.3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
![]()









