ವಿರಾಜಪೇಟೆ ಡಿ.2 NEWS DESK : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹೆಚ್.ವಿ.ನಾಗರಾಜು ಅವರನ್ನು ವಿರಾಜಪೇಟೆ ಕಾವೇರಿ ಕಾಲೇಜು ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಸಲ್ಡಾನ ನಿವೃತ್ತ ಪ್ರಾಧ್ಯಾಪಕ ನಾಗರಾಜು ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಕಾವೇರಿ ಪಿ ಯು ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ, ಐಕ್ಯೂಎಸಿ ಸಂಚಾಲಕಿ ಪ್ರಿಯ ಮುದ್ದಪ್ಪ, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹೆಚ್.ವಿ.ನಾಗರಾಜು ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ವಿರಾಜಪೇಟೆ ಕಾವೇರಿ ಕಾಲೇಜುಗಳಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಸುದೀರ್ಘವಾದ 31 ವರ್ಷಗಳ ಪ್ರಾಧ್ಯಾಪಕ ಸೇವೆಯ ಜೊತೆಯಲ್ಲಿ ಹತ್ತು ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಎನ್.ಎಸ್.ಎಸ್ ಅಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.











