ಮಡಿಕೇರಿ ಡಿ.3 NEWS DESK : ಪೊನ್ನಂಪೇಟೆ-ಕಾನೂರು-ನಿಟ್ಟೂರು ರಸ್ತೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕಾಮಗಾರಿಯನ್ನು ಅತ್ಯಂತ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಂಡು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮೀದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರು ರಮೇಶ್, ಪಂಚಾಯಿತಿ ಸದಸ್ಯರು ಬೋಪಣ್ಣ, ದಾನಿಗಳು ಜೀವನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪ್ರತ್ಯು, ಹಿರಿಯರು ಪೆಮ್ಮಂಡ ಪೊನ್ನಪ್ಪ, ಪಕ್ಷದ ಮುಖಂಡರು ಮುಕಟೀರ ಸಂದೀಪ್, ವಿನು ಉತ್ತಪ್ಪ, ಮನು, ಸಿದ್ದು ನಾಚಪ್ಪ, ನಿಖಿಲ್ ಸೋಮಣ್ಣ, ಅಜ್ಜಿಕುಟ್ಟಿರ ಪೊನ್ನು, ಪಮು, ಅಣ್ಣಳ್ಳಮಾಡ ಹರೀಶ್, ಅಂಟೋನಿ, ಚೆಕೇರ ಸುಧೀರ್, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು. ರಸ್ತೆಯ ಅಭಿವೃದ್ಧಿಗೆ ಶಾಸಕರು ರಾಜ್ಯ ಸರ್ಕಾರದಿಂದ ₹ 5.30 ಕೋಟಿ ಅನುದಾನವನ್ನು ಒದಗಿಸಿದ್ದಾರೆ.











