
ಮಡಿಕೇರಿ ಡಿ.4 NEWS DESK : ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ಅಂತರ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು. ಎಸ್, ಮೊಹಮ್ಮದ್ ಶಿಫಾನ್ ಕೆ.ಸಿ ಭಾಗವಹಿಸಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡು, ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಾಜಿ ಅಧ್ಯಕ್ಷರಾದ ಮೇಕೇರಿರ ಕೆ. ಕಾರ್ಯಪ್ಪ ಅವರ ಸ್ಮರಣಾರ್ಥಕವಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಮನ್ ಸುದೇಶ್ ಬಿ.ಎಸ್ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದ ದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.









