

ಮಡಿಕೇರಿ ಡಿ.4 NEWS DESK : ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಕಟ್ಟಡ ಮತ್ತು ಇತರೆ ಕಾರ್ಮಿಕ ಮಂಡಳಿಯ ನೀಡಲಾಗುವ ಕಿಟ್ ಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಇದೇ ಸಂದರ್ಭ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾಮಗಾರ ಕಲ್ಯಾಣ ಮಂಡಳಿ ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಸಂಚಾರಿ ಆರೋಗ್ಯ ಘಟಕವನ್ನು ಸಹ ಉದ್ಘಾಟನೆ ಮಾಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪುರಸಭೆ ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್ ,ಪಕ್ಷದ ಮುಖಂಡರು ಮಹಾದೇವ, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.









