
ಮಡಿಕೇರಿ ಡಿ.4 NEWS DESK : ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾಮಗಾರಿ ಕಲ್ಯಾಣ ಮಂಡಳಿ ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಸಂಚಾರಿ ಆರೋಗ್ಯ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪುರಸಭೆ ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್ ,ಪಕ್ಷದ ಮುಖಂಡರು ಮಹಾದೇವ, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.









