

ಚೆಟ್ಟಳ್ಳಿ ಡಿ.4 NEWS DESK : ಚೆಟ್ಟಳ್ಳಿಯ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಪುತ್ತರಿ ಧಾರೆ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಊರಿನ ತಕ್ಕರಾದ ಮುಳ್ಳಂಡ ಕರಣ್ ಕಾವೇರಪ್ಪ ಅವರ ಸಮ್ಮುಖದಲ್ಲಿ ನಾಗ, ಕ್ಷೇತ್ರಪಾಲಕ, ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿ ಶ್ರೀ ಭಗವತಿಗೆ ವಿಶೇಷ ಪೂಜೆ ಜರುಗಿತು. ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.. ಹಿರಿಯರಾದ ನಿವೃತ್ತ ಕ್ಯಾಪ್ಟನ್ ಮುಳ್ಳಂಡ ತಿಮ್ಮಯ್ಯ ಮಾತನಾಡಿ, ಕೊಡಗಿನ ಸಂಪ್ರದಾಯದಂತೆ ಪುತ್ತರಿ ನಮ್ಮೆಯ ಆಚರಣೆಯನ್ನು ಮಾಡುತ್ತಾ ಬರುತ್ತಿದ್ದು, ಈ ವರ್ಷವು ಸಂಪ್ರದಾಯಬದ್ಧವಾಗಿ ನಮ್ಮೆಯನ್ನು ಆಚರಿಸಲಾಗುತ್ತಿದೆ ಎಂದರು.











