ಸೋಮವಾರಪೇಟೆ ಡಿ.4 NEWS DESK : ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ವಿದ್ಯಾರ್ಥಿಗಳಿಗೆ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಾ ಕಾರಂಜಿ ಕೇವಲ ಸ್ಫರ್ಧೆಯಲ್ಲ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗಿದೆ. ಇಲ್ಲಿ ಸಿಗುವ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡರೆ ಇನ್ನಷ್ಟು ಕಲಿಕೆಯ ಬಗ್ಗೆ ಆಸಕ್ತಿ ಮೂಡುತ್ತದೆ ಎಂದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜು, ಸರ್ಕಾರಿ ನೌಕರರ ಸಂಘದ ನಿರ್ದೆಶಕ ಎಂ.ಎಂ.ಯಶ್‍ವಂತ್ ಕುಮಾರ್, ಬೇಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್, ಸಿಆರ್‍ಪಿ ಗಿರೀಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಯಶವಂತ್, ಗ್ರಾಮದ ಪ್ರಮುಖರಾದ ಪಾಪಮ್ಮ, ಸುಮಾ, ಪುಟ್ಟರಾಜು, ಸುರೇಂದ್ರ ಸುರೇಶ ಮತ್ತಿತರರು ಇದ್ದರು. ಶಿಕ್ಷಕರಾದ ಭಾಗ್ಯ, ಧರ್ಮಾವತಿ, ಗೀತಾ ಕಾರ್ಯಕ್ರಮ ನಿರ್ವಹಿಸಿದರು.











