ಮಡಿಕೇರಿ ಡಿ.5 NEWS DESK : ಕೊಡಗಿನ ಸುಗ್ಗಿ ಹಬ್ಬವಾದ ಪುತ್ತರಿಯನ್ನು ಕೊಡಗಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಪುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಗದಿತ ಸಮಯದಲ್ಲಿ ಕದಿರು ಕೊಯ್ದು ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪೊಲಿಪೊಲಿ ದೇವಾ ಉದ್ಘೋಷಣೆಯೊಂದಿಗೆ ಧಾನ್ಯಲಕ್ಷ್ಮಿಯನ್ನು ಬರಮಾಡಿಕೊಂಡರು. ನಂತರ ನೆರೆದಿದ್ದವರಿಗೆ ಕದಿರು ವಿತರಿಸಲಾಯಿತು.











