ಮಡಿಕೇರಿ ನ.5 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕೊಡಗು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಕಾಲೇಜು ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದ ಭಾಗವಹಿಸಿದ್ದ ಕ್ರೀಡಾಕೂಟದಲ್ಲಿ ಮೊದಲ ಸೆಮಿ ಫೈನಲ್ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡಗಳ ನಡುವೆ ನಡೆದು ಮೂರ್ನಾಡು ಪ್ರಥಮ ದರ್ಜೆ ಕಾಲೇಜು ತಂಡ ಪೈನಲ್ ಪ್ರವೇಶಿಸಿತು. ದ್ವಿತೀಯ ಸೆಮಿ ಫೈನಲ್ ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ಗೋಣಿಕೊಪ್ಪಲು ಕಾವೇರಿ ಕಾಲೇಜು ತಂಡಗಳ ನಡುವೆ ನಡೆದು ವಿರಾಜಪೇಟೆ ಕಾವೇರಿ ಕಾಲೇಜು ಫೈನಲ್ ಪ್ರವೇಶ ಪಡೆಯಿತು. ಅಂತಿಮವಾಗಿ ನಡೆದ ಫೈನಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಕಾಲೇಜಿನ ತಂಡ ಮೂರ್ನಾಡು ಪ್ರಥಮ ದರ್ಜೆ ಕಾಲೇಜನ್ನು ಸೋಲಿಸಿ ಪ್ರಥಮ ಸ್ಥಾನ ಪಡೆಯಿತು. ಮೂರ್ನಾಡು ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತ್ತು. ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳ ತಂಡವನ್ನು ಹಾಗೂ ತರಬೇತಿ ನೀಡಿದ ಕಾಲೇಜಿನ ದೈಹಿಕ ನಿರ್ದೇಶಕ ತಮ್ಮಯ್ಯ ರನ್ನು ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಕಾಲೇಜಿನ ಪರವಾಗಿ ಅಭಿನಂದಿಸಿದ್ದಾರೆ.











