ಮಡಿಕೇರಿ ಡಿ.6 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕಗ್ಗೋಡ್ಲುವಿನ ಹೂಕಾಡು ಪೈಸಾರಿಗೆ ಭೇಟಿ ನೀಡಿದ ಶಾಸಕರು ಇಲ್ಲಿಯ ಪ್ರಸಿದ್ಧ ಕರಿ ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶಾಸಕರ ಅನುದಾನದ ರೂ.25 ಲಕ್ಷಗಳಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಎಲ್ಲರಿಗೆ ಶುಭ ಕೋರಿದರು. ಬಳಿಕ ಮೇಕ್ ಏರಿಯ ಶಾಲೆ ಎದುರಿನ ಮುಖ್ಯ ರಸ್ತೆ ಬಳಿ, ನೂತನವಾಗಿ ಶಾಸಕರ ಅನುದಾನದಲ್ಲಿ ನಿರ್ಮಾಣ ಆಗುತ್ತಿರುವ ಬಸ್ ತಂಗುದಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಹಾಕತ್ತೂರು ವಲಯ ಅಧ್ಯಕ್ಷರು ಪಿಯೂಸ್, ಮೇಕೇರಿ ವಲಯ ಪೊನ್ನಪ್ಪ, ಶಾರದಾ, ಜಗತ್, ವಿಜಯಲಕ್ಷ್ಮಿ , ಬೂತ್ ಅಧ್ಯಕ್ಷರು ಕೊರಗಪ್ಪ, ಶಂಕರ ಪೂಜಾರಿ, ತಿಮ್ಮಯ್ಯ, ಪಂಚಾಯಿತಿ ಸದಸ್ಯರು ಹನೀಫ್, ಸೂರಜ್ ಹೊಸೂರು, ಉದಯ ಅಯ್ಯಪ್ಪ, ಸಾಕಿಬ್, ಪ್ರಕಾಶ್, ಆಪ್ರು ರವೀಂದ್ರ, ರತ್ನಕರ್ ರೈ,ಅಭಿನ್ ರೈ ಹಾಗೂ ಉಪಸ್ಥಿತರಿದ್ದರು. ಸಿದ್ದಾಪುರ ಗ್ರಾಮದ ಮಾಲ್ದಾರೆ ಪಂಚಾಯಿತಿ ವ್ಯಾಪ್ತಿಯಲ್ಲಿವಿವಿಧ ಅಭಿವೃದ್ಧಿ ಕಾರ್ಯಕ್ರಮ ಪ್ರಯುಕ್ತ ಭೇಟಿ ನೀಡಿದರು. ಮೊದಲಿಗೆ, ಬಾಡಗ ಬಾಣಂಗಾಲ ಮಠಕ್ಕೆ, ರೂ.20 ಲಕ್ಷ ಅನುದಾನದಲ್ಲಿ, ವಿದ್ಯುತ್ ಸಂಪರ್ಕ ಕಲ್ಪಿಸುವ ನೂತನ ವಿದ್ಯುತ್ ಮಾರ್ಗವನ್ನು ಉದ್ಘಾಟಿಸಿ ಶಾಸಕರು ಶುಭ ಕೋರಿದರು. ಬಳಿಕ ಭಜಗೊಳ್ಳಿ ಮಸೀದಿಗೆ ಭೇಟಿ ನೀಡಿದ ಮಾನ್ಯ ಶಾಸಕರು, ಅಲ್ಲಿಯ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಸ್ಥಳೀಯರೊಂದಿಗೆ ಅವರ ಅಹವಾಲುಗಳನ್ನು ಆಲಿಸಿದರು. ಇದೇ ಸಂದರ್ಭದಲ್ಲಿ ಬಾಣಂಗಲದಲ್ಲಿರುವ ಸೇತುವೆಯ ವೀಕ್ಷಣೆ ನೆರವೇರಿಸಿದ ಶಾಸಕರು, ಸೇತುವೆಯ ಬಗ್ಗೆ ಮಾಹಿತಿಯನ್ನು ಪಡೆದು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಅಲ್ಲಿಂದ ನೇರವಾಗಿ ದಿಡ್ಡಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದ ಮಾನ್ಯ ಶಾಸಕರು, ಅಂಗನವಾಡಿ ಕೇಂದ್ರಗಳ ಮಹತ್ವದ ಬಗ್ಗೆ ತಿಳಿ ಹೇಳಿದರು ಮಾತ್ರವಲ್ಲದೆ ಈ ಭಾಗದ ಮಕ್ಕಳ ಭವಿಷ್ಯಕ್ಕೆ ಉತ್ತಮವಾದ ವಿದ್ಯಾಭ್ಯಾಸ ಒದಗಿಸಲು ಅಂಗನವಾಡಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕಿವಿ ಮಾತು ಹೇಳಿದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಈ ಅಂಗನವಾಡಿ ಕಟ್ಟಡಕ್ಕೆ ರೂ.10 ಲಕ್ಷಗಳ ಅನುದಾನ ಒದಗಿತ್ತು. ಬಳಿಕ ಮೈಲಾಪುರದಲ್ಲಿ, ಮಾನ್ಯ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಈ ರಸ್ತೆಯ ಉನ್ನತೀಕರಣ ಮಾಡಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಸದರಿ ರಸ್ತೆಯ ಅಭಿವೃದ್ಧಿಗೆಂದು ಮಾನ್ಯ ಶಾಸಕರು ಸಮಗ್ರ ಗಿರಿಜನ ಕಲ್ಯಾಣ ಯೋಜನೆಯಡಿ ರೂ.28 ಲಕ್ಷಗಳನ್ನು ಒದಗಿಸಿದ್ದರು.
ಇದೆ ಸಂದರ್ಭದಲ್ಲಿ ಸಿದ್ದಪಾಜಿ ದೇವಸ್ಥಾನ ಅಭಿವೃದ್ಧಿಗೆ ಭೂಮಿ ಪೂಜೆ ನೆರೆವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜೋನ್ಸನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಕೆಡಿಪಿ ಸದಸ್ಯರು ರಫೀಕ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ಮಲ್ದಾರೆ ಪಂಚಾಯಿತಿ ಅಧ್ಯಕ್ಷರು ಮಾಲತಿ, ವಲಯ ಅಧ್ಯಕ್ಷರು ಸಜಿ ಥಾಮಸ್, ಸಿದ್ದಾಪುರ ವಲಯ ಪ್ರತೀಶ್, ಪಂಚಾಯತ್ ಸದಸ್ಯರು ಮಹಮ್ಮದ್ ಆಲಿ ,ಮೊಯಿದೀನ್, ಮನೋಹರ್, ಹೆಮಚಂದ್ರ, ರಫೀಕ್, ರಶೀದ್, ಅಬುಬುಕರ್, ಗಾಫುರ್, ಜಫರ್, ಅಶ್ರಫ್, ಹನೀಫ್, ಇಸ್ಮಾಯಿಲ್, ಅನಿಲ್, ಚೆಕು, ಚಿನ್ನಮ್ಮ, ಗಣೇಶ್, ಶಂಕರ, ನರೇಂದ್ರ ಕಾಮತ್, ಆಪ್ರು ರವೀಂದ್ರ, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಮಂಜುನಾಥ್, ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.












