ಮಡಿಕೇರಿ NEWS DESK ಡಿ.6 : ಸಾಮಾಜಿಕ ಕಾರ್ಯಕರ್ತ ಹಾಗೂ ನಗರಸಭೆಯ ಬಿಜೆಪಿ ಸದಸ್ಯರಾದ ಉಷಾ ಕಾವೇರಪ್ಪ ಅವರ ಪತಿ ಎಂ.ಕೆ.ಕಾವೇರಪ್ಪ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯ, ಜನಪರ ಕಾಳಜಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಇಚ್ಛಾಶಕ್ತಿ ಮತ್ತು ಜನಸ್ನೇಹಿ ಗುಣವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಕಾವೇರಪ್ಪ ತಿಳಿಸಿದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಮೂಲಕ ಶಾಸಕರಿಗೆ ಶಕ್ತಿ ತುಂಬುವುದಾಗಿ ಹೇಳಿದರು. ಈ ಸಂದರ್ಭ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಶಾಸಕ ಡಾ ಮಂತರ್ ಗೌಡ ಅವರು ಕಾಂಗ್ರೆಸ್ ಶಾಲು ಹಾಕಿ ಕಾವೇರಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.










