Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಾ.ಬಿ.ಆರ್.ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಡಾ.ಬಿ.ಆರ್.ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಡಿಸೆಂಬರ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಡಿ.6 NEWS DESK : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿರು. ನಂತರ ಮಾತನಾಡಿದ ಅವರು,  ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು. ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ನಿತ್ಯ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ.  ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ನಾವು ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.13 NEWS DESK : ಪ್ರಸಕ್ತ (2026-27) ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಪ್ರಾರಂಭಗೊಂಡಿದ್ದು ರೈತರು…

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.