
ವಿರಾಜಪೇಟೆ ಡಿ.6 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ವತಿಯಿಂದ ಸರಕಾರಿ ಪ್ರೌಢಶಾಲೆ ಕೊಂಡಂಗೇರಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕೊಂಡಂಗೇರಿಯ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕರಾದ ರಮೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಲೋಕೇಶ್ ಹೆಚ್.ಡಿ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ದುಶ್ಚಟದಿಂದ ಮನುಷ್ಯನ ದೇಹ ಮನಸ್ಸು ಹಾಳಾಗುತ್ತದೆ. ಮನುಷ್ಯನ ದೇಹ, ಮನಸ್ಸು, ಆರೋಗ್ಯ ಚೆನ್ನಾಗಿದ್ದರೆ ಏನಾದರೂ ಜೀವನದಲ್ಲಿ ಸಾಧನೆ ಮಾಡಬಹುದು, ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಹಾನಿಕಾರಕ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಇನ್ನು ಮುಂದಕ್ಕೆ ತರಗತಿಯಲ್ಲಿ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಬೋಧನೆ ಕ್ಲಾಸ್ ಮಾಡಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮೇಲ್ವಿಚಾರಕ ಧನೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷರಾದ ನೇತ್ರಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಮೀನಾಕ್ಷಿ, ಶಿಕ್ಷಕರಾದ ಸವಿತಾ, ಸಹ ಶಿಕ್ಷಕರಾದ ದಿವ್ಯ, ಸುಲೈಮಾನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









