
ಮಡಿಕೇರಿ ಡಿ.6 NEWS DESK : ವಿರಾಜಪೇಟೆ ತಾಲೂಕಿನ ಕಾವಡಿ-ಅಮ್ಮತಿ ಗ್ರಾಮದ ಕ್ರಿಶ್ಚಿಯನ್ ಕಾಲೋನಿ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಕಾವಡಿ ಅಮ್ಮತಿ ಗ್ರಾಮದ, ಕ್ರಿಶ್ಚಿಯನ್ ಕಾಲೋನಿ ರಸ್ತೆ ಅಭಿವೃದ್ಧಿಗೆ, ಈ ಹಿಂದೆ ಸ್ಥಳೀಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಉತ್ತಮ ರಸ್ತೆಯ ಅವಶ್ಯಕತೆಯನ್ನು ಮನಗಂಡ ಶಾಸಕರು ತಕ್ಷಣವೆ ಅನುದಾನ ಬಿಡುಗಡೆಗೊಳಿಸಿದ್ದು, ಈಗ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ತಮ್ಮ ದಶಕದ ಬೇಡಿಕೆಗೆ ಸ್ಪಂದಿಸಿದ ಶಾಸಕರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕಾಮಗಾರಿ ಮಂಜೂರು ಮಾಡಿಸುವಲ್ಲಿ ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ಅರ್ಪಿಸಿದ್ದಾರೆ.









