
ಹಾಸನ ಡಿ.6 NEWS DESK : ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕಂದಾಯ ಇಲಾಖೆಯ ದರಖಾಸ್ತು ಪೋಡಿ, ಪೌತಿ ಖಾತೆ, ಕಂದಾಯ ಗ್ರಾಮ, 94ಸಿ ಹಕ್ಕುಪತ್ರಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸವಲತ್ತು ವಿತರಣೆ ಮಾಡಿದರು. ಇದರಿಂದ ಜಿಲ್ಲೆಯ ಸುಮಾರು 50,000ಕ್ಕೂ ಹೆಚ್ಚಿನ ಕುಟುಂಬಗಳಿಗೆ ಅನುಕೂಲವಾಗಲಿದೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸಂಸದರಾದ ಶ್ರೇಯಸ್ ಪಟೇಲ್ ಸೇರಿದಂತೆ ಜಿಲ್ಲೆಯ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.











