Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಭ್ರಮದಿಂದ ನಡೆದ ಕೈಮುಡಿಕೆ ಪುತ್ತರಿ ಕೋಲ್ ಮಂದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಭ್ರಮದಿಂದ ನಡೆದ ಕೈಮುಡಿಕೆ ಪುತ್ತರಿ ಕೋಲ್ ಮಂದ್*

ಡಿಸೆಂಬರ್ 8, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.8 NEWS DESK : ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡುಗಳು ಒಂದೆಡೆ ಸೇರಿ ನಡೆಸುವ ಇತಿಹಾಸ ಪ್ರಸಿದ್ಧ ‘ಕೈಮುಡಿಕೆ ಪುತ್ತರಿ ಕೋಲ್ ಮಂದ್’ ಕುಂದ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಅವರ ನೇತೃತ್ವದಲ್ಲಿ ಸಂಭ್ರಮದಿಂದ ನಡೆಯಿತು. ಮೂರು ನಾಡಿನ ತಕ್ಕ ಮುಖ್ಯಸ್ಥರು, ಮೂರು ಕಡೆಯಿಂದ ಪಟ್ಟು ಹಿಡಿದು ಓಡಿ ಬಂದು ಮಂದ್ ಮಧ್ಯ ಭಾಗದಲ್ಲಿರುವ ಆಲದ ಮರಕ್ಕೆ ಕೋಲು ಬಾರಿಸುವ ಮೂಲಕ ಮಂದ್’ಗೆ ಚಾಲನೆ ನೀಡಲಾಯಿತು. ನಂತರ ಮೂರು ನಾಡಿನವರು ಒಟ್ಟಾಗಿ ಸೇರಿ ಪುತ್ತರಿ ಕೋಲು ಹೊಡೆಯುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಬಾಚಿರಣಿಯಂಡ ಅಪ್ಪಣ್ಣ ಹಾಗೂ ಅಖಿಲ ಕೊಡವ ಸಮಾಜ ಪೊಮ್ಮಕಡ ಪರಿಷತ್ ಅಧ್ಯಕ್ಷೆ ಬಾಚಿರಣಿಯಂಡ ರಾಣು ಅಪ್ಪಣ್ಣ ದಂಪತಿಗಳನ್ನು ಕೈಮುಡಿಕೆ ಮಂದ್ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಚಿರಣಿಯಂಡ ಅಪ್ಪಣ್ಣ ಅವರು, ಹಿಂದಿನ ಕಾಲದಲ್ಲಿ ಹಲವಾರು ಮಂದ್ ಇದ್ದರೂ ಬೊಟ್ಟಿಯತ್ ನಾಡಿನ ಕೈ ಮುಡಿಕೆ ಕೋಲ್ ಮಂದ್ ಬಹಳ ಪ್ರಸಿದ್ಧಿಯನ್ನು ಪಡೆದಿತ್ತು. 54 ವರ್ಷಗಳ ಹಿಂದೆ ಈ ಮಂದ್ ಗೆ ಭೇಟಿ ನೀಡಿದ್ದೆ. ಅಲ್ಲದೆ ಕಳೆದ 28 ವರ್ಷಗಳ ಹಿಂದೆ ಈ ಜಾಗಕ್ಕೆ ಭೇಟಿ ನೀಡಿ ಇದರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿದ್ದೆವು ಎಂದು ಆ ದಿನಗಳನ್ನು ಮೆಲುಕು ಹಾಕಿದರು. ಕೊಡವ ಸಂಸ್ಕೃತಿ ಆಚಾರ ವಿಚಾರವನ್ನು ಬೆಳೆಸುವಲ್ಲಿ ಈ ಮಂದ್ ಶ್ರಮಿಸುತ್ತಿದೆ. ಕೊಡಗಿನಲ್ಲಿರುವ ಹಲವಾರು ಮಂದ್ ಅಭಿವೃದ್ದಿ ಕಾಣದೇ ಮುಚ್ಚಿಹೋಗಿವೆ. ಆದರೆ ಹಿಂದಿನ ಕಾಲದಂತೆಯೇ ಸಂಭ್ರಮ ಸಡಗರದಿಂದ ಕಾರ್ಯನಿರ್ವಹಿಸುತ್ತಿರುವ ಕೈಮುಡಿಕೆ ಮಂದ್ ಕೊಡವರ ಸಂಸ್ಕೃತಿ, ಆಚಾರ ವಿಚಾರ ಉತ್ತುಂಗಕ್ಕೆ ತಲುಪುವುದರಲ್ಲಿ ಸಂಶಯವಿಲ್ಲ ಎಂದರು.  ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅವರು ಮಾತನಾಡಿ, ನಾನು ಹುಟ್ಟಿಬೆಳೆದ ನಾಡಿನಲ್ಲಿ ನನಗೆ ದೊರಕಿರುವ ಸನ್ಮಾನ ನಿಜಕ್ಕೂ ಖುಷಿಕೊಟ್ಟಿದೆ. ಕೊಡಗಿನ ಆಚಾರ, ವಿಚಾರ, ಪದ್ಧತಿ, ಪರಂಪರೆ ಉಳಿಸಿ ಬೆಳೆಸಿ ಕಿರಿಯರಿಗೆ ತಿಳುವಳಿಕೆ ನೀಡಿರುವುದು ನಮ್ಮ ಹಿರಿಯರು. ಹಲವಾರು ಮಂದ್ ಮಾನಿಗಳು ಮುಚ್ಚಿ ಹೋಗಿರುವ ಸಂದರ್ಭದಲ್ಲಿಯೂ ಈ ಕೈಮುಡಿಕೆ ಮಂದ್ ಕಂಬದಂತೆ ನಿಂತು ಕೊಡವರ ಆಚಾರ, ವಿಚಾರವನ್ನು ಬೆಳೆಸುತ್ತಾ ಬಂದಿದೆ. ಇಷ್ಟು ವರ್ಷದವರೆಗೂ ಆಚಾರ ವಿಚಾರವನ್ನು ಪ್ರೋತ್ಸಾಹಿಸಿ ಬೆಳೆಸಿ ಕೈಮುಡಿಕೆ ಮಂದ್ ಅನ್ನು ಹಾಗೆಯೇ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರ. ಈ ಕೈಮುಡಿಕೆ ಮಂದ್ ನ ಕೀರ್ತಿ ಜಗತ್ತಿನೆಲ್ಲೆಡೆ ಬೆಳಗುವಂತಾಗಲಿ ಎಂದು ಹಾರೈಸಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೊಟ್ಟಿಯತ್ ಮೂಂದ್ ನಾಡ್ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ,  ಹಿಂದಿನ ಕಾಲದಲ್ಲಿ ಮಂದ್ ಹಾಗೂ ಮುಂದ್ ಎಂಬ ಎರಡು ಪ್ರಾಮುಖ್ಯ ಸ್ಥಳಗಳಿದ್ದವು. ಮಂದ್ ನಲ್ಲಿ ಊರು ಕೇರಿಯ ವ್ಯಾಜ್ಯಗಳು ಬಗೆ ಹರಿಯದಿದ್ದರೆ, ಮುಂದ್ ನಲ್ಲಿ ಕುಟುಂಬದ ವ್ಯಾಜ್ಯಗಳು ಬಗ್ಗೆ ಹರಿಯುತ್ತಿದ್ದವು. ಈ ಮಂದ್ ಮೂರು ನಾಡಿಗೆ ಸೇರಿರುವ ಜಾಗವಾಗಿದ್ದರು ಬೊಟ್ಟಿಯತ್ ನಾಡ್ ನಲ್ಲಿ ವೀರ ಪಡೆಯಾಳಿ ಜನಿಸಿರುವ ಈ ಮಣ್ಣಿನಲ್ಲಿ ಜನರಲ್ ತಿಮ್ಮಯ್ಯ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಕೋಲಾಟ ಆಡಿರುವುದು ಹೆಮ್ಮೆಯ ವಿಚಾರ. ಕೊಡವರ ಆಚಾರ ವಿಚಾರ ಉಡುಗೆ ತೊಡುಗೆಗೆ ಧಕ್ಕೆ ಉಂಟಾದ ಸಂದರ್ಭದಲ್ಲಿ ನಡುಪು ಕಾರ್ಯಕ್ರಮ ಏರ್ಪಡಿಸುವ ಸಂದರ್ಭದಲ್ಲಿ ಮೊದಲಿಗೆ ಇದೇ ಮಂದ್‌ನಲ್ಲಿ ಕೊಡವರು ಹಾಗೂ ಮೂಲ ನಿವಾಸಿಗಳು ಸಭೆ ಸೇರಿ ಸಾವಿರಾರು ಸಂಖ್ಯೆಯಲ್ಲಿ ಕೊಡಗಿನ ಮೂಲ ನಿವಾಸಿಗಳು ನಡುಪು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಂದ್ ಮಾನಿಯಲ್ಲಿ ಸೇರುವ ಕೊಡವ ಬಾಂಧವರು ಕೊಡವರ ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸಬೇಕು. ಇಂದಿನ ಕಾರ್ಯಕ್ರಮದಲ್ಲಿ ಯುವಕರು ಕೊಡವರ ಸಾಂಪ್ರದಾಯಿಕ ಉಡುಪಿನಲ್ಲಿ ಬಾರದೇ ಇರುವುದು ಬೇಸರದ ಸಂಗತಿಯಾಗಿದೆ. ಕೊಡವರ ಉಡುಪು ಕೇವಲ ಮದುವೆ ಸಮಾರಂಭಗಳಿಗೆ ಸೀಮಿತವಲ್ಲ ಮಂದ್ ಎಂಬ ದೇವರ ಸ್ಥಾನಕ್ಕೆ ಕೊಡವರು ತಮ್ಮ ಸಾಂಪ್ರದಾಯಿಕ ಉಡುಪಿನಲ್ಲಿ ಬರದಿದ್ದ ಮೇಲೆ ಬೇರೆ ಯಾವ ಕಾರ್ಯಕ್ಕಾಗಿ ಕೊಡವರ ಉಡುಪು ಇದೆ ಎಂದು ಪ್ರಶ್ನಿಸಿದರಲ್ಲದೆ, ಮಂದ್ ಮಾನಿಗೆ ಬರುವಾಗ ಕೊಡವರ ಸಾಂಪ್ರದಾಯಿಕ ಉಡುಪು ಧರಿಸಿ ಬರಬೇಕೆಂದು ಮನವಿ ಮಾಡಿದರು.   ಬೇರಳಿನಾಡ್ ತಕ್ಕ ಮಳುವಂಡ ಭುವೇಶ್ ದೇವಯ್ಯ, ಕುತ್ತ್ ನಾಡ್ ತಕ್ಕ ಪಂದಿಮಾಡ ರಮೇಶ್ ಅಚ್ಚಪ್ಪ, ಮೂಂದ್ ನಾಡ್ ಗೌರವ ಕಾರ್ಯದರ್ಶಿ ನಾಳಿಯಮ್ಮಂಡ ಉಮೇಶ್ ಕೇಚಮ್ಮಯ್ಯ, ಬೇರಳಿನಾಡ್ ಕಾರ್ಯದರ್ಶಿ ಅಪ್ಪಂಡೇರಂಡ ಮೋಹನ್, ಬೊಟ್ಟಿಯತ್ ನಾಡ್ ಸಹ ಕಾರ್ಯದರ್ಶಿ ತೀತಮಾಡ ಶಿವಮಣಿ ಕರುಂಬಯ್ಯ, ಕುತ್ತ್ ನಾಡ್ ಸಹ ಕಾರ್ಯದರ್ಶಿ ತೀತಮಾಡ ಗಣೇಶ್ (ಗಾಂಧಿ), ಹಳ್ಳಿಗಟ್ಟ್ ಊರು ತಕ್ಕ ಚಮ್ಮಟೀರ ಪ್ರವೀಣ್ ಉತ್ತಪ್ಪ, ಅಚ್ಚಿಯಂಡ ವೇಣು ಗೋಪಾಲ್, ಅರ್ವತೋಕ್ಲು ಊರು ತಕ್ಕ ಕಾಡ್ಯಮಾಡ ಮೋತಿ ಅಪ್ಪಚ್ಚು, ಕುಂದ ಊರು ತಕ್ಕ ಕೋಡಂದೆರ ಸುಬ್ಬಯ್ಯ, ಈಚೂರು ಊರು ತಕ್ಕ ತೀತಮಾಡ ಉಮೇಶ್, ಮುಗುಟಗೇರಿ ಊರು ತಕ್ಕ ಮನೆಯಪಂಡ ಬೆಳ್ಯಪ್ಪ, ಬೇರಳಿನಾಡಿನ ತಕ್ಕ ಅಪ್ಪಂಡೇರಂಡ ಅಶೋಕ್, ಕೊಂಗಂಡ ಡೆಟ್ರನ್, ಮೂಕಚಂಡ ಚುಮ್ಮಿ ದೇವಯ್ಯ, ಬೋಳಡಿಚಂಡ ಕಿರಣ್ ಸೇರಿದಂತೆ ಇತರ ತಕ್ಕಮುಖ್ಯಸ್ಥರು ಉಪಸ್ಥಿತರಿದ್ದರು. ಪೊನ್ನಂಪೇಟೆ ಕೊಡವ ಪೊಮ್ಮಕಡ ಕೂಟ, ಕಾವೇರಿ ಕಾಲೇಜ್ ವಿದ್ಯಾರ್ಥಿಗಳು, ಅಪ್ಪಚ್ಚಕವಿ ವಿದ್ಯಾರ್ಥಿಗಳು, ಕುತ್ತ್ ನಾಡ್ ಪೊಮ್ಮಕ್ಕ, ಲಯನ್ಸ್ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮೂರು ನಾಡಿನವರಿಂದ ಉಮ್ಮತಾಟ್, ಬೊಳಕಾಟ್, ಕತ್ತಿಯಾಟ್, ಪರೆಯಕಳಿ, ಬಾಳೋ ಪಾಟ್, ಗ್ರೂಪ್ ಡಾನ್ಸ್, ಕೊಡವ ಪಾಟ್ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಕಣ್ಮನ ಸೆಳೆಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.11 NEWS DESK : ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ…

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.