*ವಿರಾಜಪೇಟೆ ಡಿ.9 NEWS DES : ಮುಂದಿನ ದಿನದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವಿರಾಜಪೇಟೆಯ 19 ವಲಯಗಳಲ್ಲಿ 16 ವಲಯಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಹೆಚ್.ಮತೀನ್ ಹೇಳಿದರು. ವಿರಾಜಪೇಟೆ ನಗರದ ನಿರೀಕ್ಷಣಾ ಮಂದಿರದ ಆವರಣದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಬಡ ಜನತೆಗೆ ತುಂಬಾ ಅನುಕೂಲವಾಗಿದೆ, ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ನಿರೀಕ್ಷೆಗೂ ಮೀರಿ ಕೋಟಿ ಲೆಕ್ಕದಲ್ಲಿ ಅನುದಾನ ತಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗಳು ಇಂದು ಅಭಿವೃದ್ಧಿಯತ್ತ ಸಾಗುತ್ತಿದೆ, ವಿರಾಜಪೇಟೆ ಪಟ್ಟಣದ ಮುಖ್ಯರಸ್ತೆ ಕಾಮಗಾರಿ ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ರಸ್ತೆ ಅಗಲಿಕರಣ ಅಭಿವೃದ್ಧಿಗೆ ಕಾಮಗಾರಿ ಪ್ರರಂಭಗೋಂಡಿದ್ದು ಮುಂದಿನ ಚುನಾವಣೆಗೆ ಕಾಂಗ್ರೆಸ್ ಸರಕಾರ ಮಾಡಿರುವ ಅಭಿವೃದ್ಧಿ ಕೆಲಸಗಳೆ ಅಡಿಪಾಯವಾಗಲಿದೆ. ಮಳೆಯಿಂದಾಗಿ ಅಭಿವೃದ್ದಿ ಕಾಮಗಾರಿಗೆ ಹಿನ್ನಡೆಯಾಗಿತ್ತು. ಅದಕ್ಕಾಗಿ ವಿರೋಧ ಪಕ್ಷಗಳು ತೇಜೋವಧೆ ಮಾಡುವುದು ಸರಿಯಲ್ಲ. ಶಾಸಕ ಪೊನ್ನಣ್ಣ ಅವರ ಕಾರ್ಯಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಮ್ಮ ಶಾಸಕರು ಪಕ್ಷ ಮತ್ತು ಜನಸಾಮಾನ್ಯರಿಗೋಸ್ಕರ, ಹಲವಾರು ಯೋಜನೆಗಳನ್ನು ಮತ್ತು ಅಭಿವೃದ್ದಿ ಕಾರ್ಯಗಳನ್ನು ತರುತ್ತಿದ್ದಾರೆ. ಅವರೊಂದಿಗೆ ನಾವು ಕೈಜೋಡಿಸಿ ಜನರ ಮುಂದೆ ಸತ್ಯಾಂಶವನ್ನು ತರುವ ಕೆಲಸ ಮಾಡೋಣ. ನಮ್ಮ ಶಾಸಕರೊಂದಿಗೆ ಹಗಲು ರಾತ್ರಿ ನಿಲ್ಲೋಣ ಎಂದರು. ಸಮಿತಿ ಸದಸ್ಯರಾದ ಅಮ್ಮತ್ತಿಯ ಮೈಕಲ್ ಮಾತನಾಡಿ ಅಮ್ಮತ್ತಿ ವ್ಯಾಪ್ತಿಯಲ್ಲಿ ಕೆಲವು ವರ್ಷಗಳಿಂದ ಗ್ರಾಮೀಣ ಭಾಗದ ಕೆಲವು ರಸ್ತೆಗಳಲ್ಲಿ ಜನರು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ಈಗ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಅವರು ಖುದ್ದು ಭೇಟಿ ನೀಡಿ ಅಮ್ಮತ್ತಿ-ಪಾಲಿಬೆಟ್ಟ ರಸ್ತೆ ಹಾಗೂ ತಿತಿಮತಿ ರಸ್ತೆಗಳು ಅಭಿವೃದ್ಧಿಗೊಂಡಿದೆ. ಇದರಿಂದ ಆ ಬಾಗದ ಜನರಿಗೆ ಅನುಕೂಲವಾಗಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಕೆ.ಆರ್. ಟೀನಾ ಸಭೆಯಲ್ಲಿ ಮಾತನಾಡಿ, ಸರಕಾರ ಅಭಿವ್ರದ್ದಿ ಪರ ಕೆಲಸ ಮಾಡುತ್ತಿದೆ. ಗ್ರಾಮೀಣ ಪ್ರದೇಶಗಳ ರಸ್ತೆಗಳು ಸೇರಿದಂತೆ ಐನ್‍ಮನೆ ರಸ್ತೆ ಅಭಿವ್ರದ್ದೀ ಕಾಮಗಾರಿಗಳಿಗೆ ಶಾಸಕರು ಅನುದಾನ ಒದಗಿಸಿ ಕೊಟ್ಟು ಜನಸಾಮಾನ್ಯರ ಮೂಲಭೂತ ಅವಶ್ಯಕತೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವ್ರದ್ದಿ ಕಡೆ ಗಮನ ಹರಿಸುತ್ತಾರೆ. ಸಾರ್ವಜನಿಕರು ಸಂಯಮದಿಂದ ಸಹಕರಿಸಬೇಕು. ಹಾಗೂ ಅಭಿವ್ರದ್ದೀಗೆ ಕೈ ಜೋಡಿಸಬೇಕು ಎಂದರು.
ಈ ವೇಳೆ ಪ್ರಧಾನ ಕಾರ್ಯದರ್ಶಿಗಳಾದ ರಚನ್ ಉತ್ತಪ್ಪ ಮತ್ತು ಅಗಸ್ಟಿನ್ ಬೆನ್ನಿ, ಕೋಶಾಧಿಕಾರಿ ದಿನೇಶ್ ನಂಬಿಯರ್, ಸಂಯೋಜಕರಾದ ರಂಜಿತ್ ಪೊನ್ನಣ್ಣ, ಖಜಾಂಚಿ ಮುಕ್ಕಾಟ್ಟಿರ ವಿನಿತಾ ಕಾವೇರಮ್ಮ, ಸದಸ್ಯರುಗಳಾದ ಅಬ್ದುಲ್ ಲತೀಪ್, ಮೊಯಿದು, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.









