Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ವಿಮೆ ಸೌಲಭ್ಯ : ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ : ಚೇರಂಡ ಕಿಶನ್ ಮಾದಪ್ಪ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ವಿಮೆ ಸೌಲಭ್ಯ : ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ : ಚೇರಂಡ ಕಿಶನ್ ಮಾದಪ್ಪ ಸಲಹೆ*

ಡಿಸೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.8 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ವಿಮೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮಕ್ಕೆ ರಿಪಬ್ಲಿಕ್ ಟಿವಿ ನೆಟ್‍ವರ್ಕ್ ಹಾಗೂ ಹೆಡ್ ಇಂಟರ್ ನ್ಯಾಷನಲ್ ಬಿಸಿನೆಸ್ ಸಂಸ್ಥೆ ಅಧ್ಯಕ್ಷ ಚೇರಂಡ ಕಿಶನ್ ಮಾದಪ್ಪ ಚಾಲನೆ ನೀಡಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಮೆ ಕಾರ್ಡ್ ಹಸ್ತಾಂತರಿಸಿ ಮಾತನಾಡಿದ ಕಿಶನ್ ಮಾದಪ್ಪ ಅವರು, ಸಮಾಜಕ್ಕಾಗಿ ದುಡಿಯುವ ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪತ್ರಕರ್ತರ ಸಂಕಷ್ಟಗಳಿಗೆ ವೈಯಕ್ತಿಕವಾಗಿಯು ಸ್ಪಂದಿಸುವುದಾಗಿ ಭರವಸೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗವನ್ನು ಸರಕಾರ ನಿಲ್ರ್ಯಕ್ಷಿಸುತ್ತ ಬಂದಿದೆ. ಸರಕಾರಗಳು ಪತ್ರಕರ್ತರ ಪರ ಚಿಂತನೆ ಮಾಡಿ ಅವರಿಗೆ ಶಕ್ತಿ ತುಂಬಿ ಭದ್ರತೆ ನೀಡುವ ಜವಾಬ್ದಾರಿ ಹೊಂದಿರಬೇಕು. ಜನರಿಗೆ ಸರಕಾರದ ವೈಫಲ್ಯ ಕಂಡುಬಂದಲ್ಲಿ ಬದಲಿಸುವ ಶಕ್ತಿಯಿದೆ. ಈ ವೈಫಲ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಧ್ಯಮ ಕ್ಷೇತ್ರ ಮಾಡುತ್ತಿದೆ. ಜನರು ಕಾರ್ಯಾಂಗ ಹಾಗೂ ಶಾಸಕಾಂಗದ ಮೇಲೆ ಭ್ರಮನಿರಸನ ಹೊಂದಿದ್ದಾರೆ. ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ಪತ್ರಿಕಾಂಗ, ನ್ಯಾಯಾಂಗದಿಂದ ಮಾತ್ರ ಸಾಧ್ಯ ಎಂಬ ಮನಸ್ಥಿತಿಗೆ ತಲುಪಿದ್ದಾರೆ. ಕಠಿಣ ಪರಿಸ್ಥಿತಿಯಲ್ಲಿ ಪತ್ರಕರ್ತರು ಪ್ರಾಣ ಒತ್ತೆಯಿಟ್ಟು ಕಾರ್ಯನಿರ್ವಹಿಸುತ್ತಾರೆ. ಪ್ರಜಾಪ್ರಭುತ್ವದ ಮುಖ್ಯಭೂಮಿಕೆಯಲ್ಲಿರುವ ಪತ್ರಕರ್ತರಿಗೆ ಸೂಕ್ತ ಭದ್ರತೆ ಇಲ್ಲದಿರುವುದು ವಿಪರ್ಯಾಸ ಎಂದು ವಿಷಾದಿಸಿದರು. ವಾರ್ತಾ ಮತ್ತು ಪ್ರಚಾರ ಇಲಾಖೆ ಕೇವಲ ಜಾಹೀರಾತು ನೀಡಲು ಮೀಸಲಾಗಬಾರದು. ಮಾಧ್ಯಮದ ಭದ್ರತೆಗೆ ಮುಕ್ತ ವಾತಾವರಣ ಸೃಷ್ಟಿಯಾಗಬೇಕು. ಈ ನಿಟ್ಟಿನಲ್ಲಿ ಆಯೋಗ ರಚನೆಯಾಗಬೇಕು. ವ್ಯವಸ್ಥೆಯನ್ನು ವರದಿಗಾರಿಕೆ ಮೂಲಕ ಪ್ರಶ್ನಿಸಿದರೆ ಮೊಕದ್ದಮೆ ಭಯ ಪತ್ರಕರ್ತರನ್ನು ಕಾಡುತ್ತದೆ. ಇದನ್ನು ತಪ್ಪಿಸಲು ಕಾನೂನು ರೂಪಿಸಬೇಕಾದ ಅಗತ್ಯತೆ ಇದೆ. ರಾಜಕೀಯ ಪಕ್ಷಗಳು ಪತ್ರಕರ್ತರಿಗೆ ಮಹತ್ವ ನೀಡಬೇಕು ಚಿಂತಕರ ಚಾವಡಿ ಎಂದು ಕರೆಸಿಕೊಳ್ಳುವ ವಿಧಾನಪರಿಷತ್ತು ಹಾಗೂ ರಾಜ್ಯಸಭೆಗಳಲ್ಲಿ ಪತ್ರಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡಬೇಕು. ಸರಕಾರಗಳ ಮುಂಗಂಡ ಪತ್ರದಲ್ಲಿ ಪತ್ರಕರ್ತರಿಗೆ ಸೌಲಭ್ಯ ಘೋಷಣೆಯಾಗಬೇಕು ಎಂದು ಸಂಕೇತ್ ಒತ್ತಾಯಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಪತ್ರಕರ್ತರು ಭಯ ಮುಕ್ತವಾಗಿ ಕಾರ್ಯನಿರ್ವಹಿಸಲು ವಿಮೆ ಅಭಯ ನೀಡುತ್ತದೆ. ಮಾಧ್ಯಮ ಕ್ಷೇತ್ರಕ್ಕೆ ಗುಣಮಟ್ಟದ ಪತ್ರಕರ್ತರು ಬರಬೇಕು. ಸಮಾಜಕ್ಕೆ ಇಂದಿಗೂ ಮಾಧ್ಯಮದ ಮೇಲೆ ನಂಬಿಕೆ ಇದ್ದು, ಅದನ್ನು ಉಳಿಸುವ ಕೆಲಸವಾಗಬೇಕೆಂದು ಕರೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಸವಿತಾ ರೈ ಮಾತನಾಡಿ, ಪತ್ರಕರ್ತರು ಸಂಕಷ್ಟ ಸ್ಥಿತಿಯಲ್ಲಿದ್ದು, ಈ ವಿಮೆ ಸೌಲಭ್ಯ ಅಭಯ ನೀಡುತ್ತದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಜಿಲ್ಲೆಯ ಪತ್ರಕರ್ತರು ಆರ್ಥಿಕ ಸಂಕಷ್ಟದಲ್ಲಿದ್ದು, ಆರೋಗ್ಯ ಸಮಸ್ಯೆ ಎದುರಾದಾಗ ಸಂಘದಿಂದ ಗರಿಷ್ಠ ರೂ. 10 ಸಾವಿರ ಹಣ ಮಾತ್ರ ನೀಡಲು ಸಾಧ್ಯವಿದೆ. ಈ ಹಿನ್ನೆಲೆ ಪತ್ರಕರ್ತರಿಗಾಗಿ ವಿಮೆ ಮಾಡಿಸಲು ಮುಂದಾಗಿದ್ದೇವೆ. ವಾರ್ಷಿಕ ರೂ. 550 ಮೌಲ್ಯದ ವಿಮೆಯನ್ನು ಸಂಘದ ಸದಸ್ಯರಿಗಾಗಿ ಅಂಚೆ ಕಚೇರಿ ಮೂಲಕ ಮಾಡಿಸಲಾಗಿದೆ. ಅಪಘಾತದಿಂದ ಜೀವ ಕಳೆದುಕೊಂಡರೆ ಅಥವಾ ಅಂಗ ವೈಕಲ್ಯ ಉಂಟಾದಲ್ಲಿ ರೂ. 10 ಲಕ್ಷ, ಚಿಕಿತ್ಸೆಗಾಗಿ ರೂ. 1 ಲಕ್ಷದ ತನಕ ಹಣ ವಿಮೆ ಮೂಲಕ ಸಂದಾಯವಾಗಲಿದೆ ಎಂದರು. ಅಂಚೆ ಇಲಾಖೆ ಶಾಖಾ ವ್ಯವಸ್ಥಾಪಕ ಬಬಿನ್ ಹಾಗೂ ಅಧಿಕಾರಿ ಅಶೋಕ್ ವಿಮೆ ಸೌಲಭ್ಯದ ಕುರಿತು ಮಾಹಿತಿ ಒದಗಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ವಿಮೆ ಸೌಲಭ್ಯ ಕಲ್ಪಿಸಲು ಆರ್ಥಿಕ ನೆರವು ನೀಡಿದ ಚೇರಂಡ ಕಿಶನ್ ಮಾದಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲೆಯ ವಿವಿಧೆಡೆಗಳ ಪತ್ರಕರ್ತರಿಗೆ ವಿಮೆ ಸೌಲಭ್ಯ ಮಾಡಿಸಲಾಯಿತು. ಸದಸ್ಯ ಕುಡೆಕಲ್ಲು ಗಣೇಶ್ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಸ್ವಾಗತಿಸಿ, ಖಜಾಂಚಿ ಸುನಿಲ್ ಪೊನ್ನೇಟಿ ನಿರೂಪಿಸಿ, ನಿರ್ದೇಶಕ ಜಿ.ಆರ್ ಪ್ರಜ್ವಲ್ ವ್ಯಕ್ತಿ ಪರಿಚಯ ಮಾಡಿದರು. ನಿರ್ದೇಶಕ ಪ್ರಭುದೇವ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.11 NEWS DESK : ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ…

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.