ಡಿ.10 ರಂದು ಜನಸಂಪರ್ಕ ಸಭೆ :: ಮಡಿಕೇರಿ ಡಿ.8 NEWS DESK :: ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿ.10 ರಂದು ಬೆಳಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆವರೆಗೆ ವಿರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 10 ರಂದು ಮಧ್ಯಾಹ್ನ 2.30 ಗಂಟೆಯಿಂದ 03.30 ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಹಾಗೂ ಗೋಣಿಕೊಪ್ಪ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್‍ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. :: ಡಿ.11 ರಂದು ಜನಸಂಪರ್ಕ ಸಭೆ :: ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 11 ರಂದು ಬೆಳಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 11 ರಂದು ಮಧ್ಯಾಹ್ನ 2.30 ಗಂಟೆಯಿಂದ 3.30 ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕುಶಾಲನಗರ ಹಾಗೂ ಸೋಮವಾರಪೇಟೆ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. :: ಡಿ.12 ರಂದು ಜನಸಂಪರ್ಕ ಸಭೆ ::
ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 12 ರಂದು ಬೆಳಗೆ 11.30 ಗಂಟೆಯಿಂದ 12.30 ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ), ಸೆಸ್ಕ್, ಮಡಿಕೇರಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್‍ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.










