ನಾಪೋಕ್ಲು ಡಿ.9 NEWS DESK : ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಸೋಮವಾರ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ನಡೆಸಲಾಯಿತು. ಕುಂಜಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಫಾತಿಮಾ ಮುಬಾಶಿರ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಸಭೆಯಲ್ಲಿ ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ಭಾಗವಹಿಸಿ ಮಾತನಾಡಿ, ಮಕ್ಕಳು ಮಂಡಿಸಿದ ಅಹವಾಲುಗಳನ್ನು ಮುಂದಿನ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬೀನಾ ಸುಚಿತ್ರ, ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯಮಾಡಂಡ ಹರೀಶ್ ಮೊಣ್ಣಪ್ಪ ,ಕೋಡಿಮಣಿಯಂಡ ಬೋಪಣ್ಣ ,ತುಕಡಿ ಸಾಫಿಯ, ನಂಬುಡಮಂಡ ಶೈಲ ರವರು, ಶಾಲಾ ಅಧ್ಯಾಪಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಕೆ.ಪಿ.ಬಾಣೆ ಶಾಲಾ ಮಕ್ಕಳು ಸಂವಿಧಾನ ಪೀಠಿಕೆಯನ್ನು ವಾಚಿಸಿ ಮಕ್ಕಳ ಅಹವಾಲುಗಳನ್ನು ಸಭೆಯಲ್ಲಿ ಮಂಡಿಸಿದರು. ನಂತರ ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ಮಾಡಿಸಿ ಮಾರ್ಗದರ್ಶನ ಮಾಡಲಾಯಿತು.
ವರದಿ : ದುಗ್ಗಳ ಸದಾನಂದ.











