ನಾಪೋಕ್ಲು ಡಿ.9 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಬೀದರ್‍ನಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕ್ವಾಟರ್ ಫೈನಾಲ್ಸ್ ಬಾಲಕಿಯರು ಹಾಗೂ ಫ್ರೀ ಕ್ವಾಟರ್ ಫೈನಲ್ಸ್ ಬಾಲಕರು ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದು ಕೊಟ್ಟಿರುತ್ತಾರೆ. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತೀವ್ರ ಸ್ಪರ್ಧೆಯ ನಡುವೆ ಮೂರ್ನಾಡು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಆಟದ ಶೈಲಿಯಿಂದ ಗಮನ ಸೆಳೆದರು.
ವರದಿ : ದುಗ್ಗಳ ಸದಾನಂದ.











