ನಾಪೋಕ್ಲು ಡಿ.9 NEWS DESK : ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೃಷಿ ಸಖಿ ಯರಾದ ಗಿರಿಜಾ, ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿಯನ್ನು ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಡಿದದರು. ನಂತರ ಪಂಚಾಯಿತಿಯ ಅಧ್ಯಕ್ಷರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರಿಗೆ ಪಂಚಾಯಿತಿ ಮೂಲಕ ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭ ಪಂಚಾಯಿತಿಯ ಉಪಾಧ್ಯಕ್ಷರಾದ ಬೀನ ಸುಚಿತ್ರ, ಸದಸ್ಯರುಗಳಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯ ಮಾಡಂಡ ಹರೀಶ್ ಮೊಣ್ಣಪ್ಪ, ತುಕಡಿ ಸಫಿಯ ನಂಬುಡಮಂಡ ಶೈಲಾ ಕೋಡಿಮಣಿಯಂಡ ಬೊಪಣ್ಣ, ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರುಗಳು ಸೇರಿದಂತೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.











