Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಬ್ಬಗಳ ಸಂದರ್ಭ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ : ವಿರಾಜಪೇಟೆ ನಗರ ವರ್ತಕರ ಸಂಘ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಬ್ಬಗಳ ಸಂದರ್ಭ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ : ವಿರಾಜಪೇಟೆ ನಗರ ವರ್ತಕರ ಸಂಘ ಆಗ್ರಹ*

ಡಿಸೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ರಾತ್ರಿ ವೇಳೆ ಅಂಗಡಿ ಮುಂಗಟ್ಟುಗಳು, ವ್ಯಾಪಾರ ಮಳಿಗೆಗಳನ್ನು ಶೀಘ್ರವಾಗಿ ಮುಚ್ಚುವುದರಿಂದ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ, ವರ್ತಕರುಗಳ ಹಿತದೃಷ್ಟಿಯಿಂದ ಕಾಲಾವಧಿಯನ್ನು ವಿಸ್ತರಿಸಿಕೊಡಬೇಕೆಂದು ವಿರಾಜಪೇಟೆ ನಗರ ವರ್ತಕರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಅವರ ನೇತೃತ್ವದಲ್ಲಿ ವಿರಾಜಪೇಟೆಯ ಡಿವೈಎಸ್‍ಪಿ ಮಹೇಶ್ ಕುಮಾರ್ ಹಾಗೂ ನಗರ ಠಾಣಾಧಿಕಾರಿ ಹೆಚ್.ಎಸ್. ಪ್ರಮೋದ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಪಿ.ಎ..ಮಂಜುನಾಥ್ ಅವರು, ರಾತ್ರಿ ವೇಳೆ ಸಾಮಾನು ಸಗಟುಗಳನ್ನು ಲಾರಿ ಅಥವಾ ಇನ್ನಿತರ ವಾಹನಗಳಲ್ಲಿ ತಂದು ಇಳಿಸಿ ಅದರ ನಿರ್ವಹಣೆ ಮಾಡುವ ಸಂದರ್ಭ ಕಾಲಾವಕಾಶ ಹೆಚ್ಚು ಬೇಕಾಗುತ್ತದೆ. ಅಲ್ಲದೆ ದೋರದಿಂದ ಬಂದವರಿಗೆ ಎನಾದರೂ ವಸ್ತುಗಳನ್ನು ತೆಗೆದುಕೊಳ್ಳಬೇಕೆಂದರೂ ಅಂಗಡಿಗಳು ಇರುವುದಿಲ್ಲ. ಅಲ್ಲದೆ ಕನಿಷ್ಟ ಕಾಫಿಯಾದರೂ ಕುಡಿಬೇಕೆಂದರೆ ಅದಕ್ಕೂ ಇಲ್ಲಿ ಅವಕಾಶ ಇಲ್ಲ. ಎಲ್ಲವೂ ಮುಚ್ಚಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಸಮಸ್ಯೆ, ವ್ಯಾಪಾರಸ್ಥರಿಗೂ ನಷ್ಟವಾಗುತ್ತದೆ ಎಂದರು. ಈ ಸಮಸ್ಯೆ ಕುರಿತು ವರ್ತಕರ ನಿರಂತರ ಬೇಡಿಕೆಯಂತೆ ಪೋಲಿಸ್ ಇಲಾಖೆಗೆ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ ಕೊಡುವಂತೆ ವಿರಾಜಪೇಟೆಯ ವರ್ತಕರ ಸಂಘದ ವತಿಯಿಂದ ವಿರಾಜಪೇಟೆಯ ವೃತ್ತ ನಿರೀಕ್ಷಕರಿಗೆ ಮನವಿ ಮಾಡುತ್ತಿದ್ದೇವೆ ಎಂದರಲ್ಲದೆ, ಕೆಲ ಸಾರ್ವಜನಿಕರು ರಾತ್ರಿ ಹೊತ್ತು ಮಧ್ಯಪಾನ ಮಾಡಿ ವರ್ತಕರಿಗೆ ತೊಂದರೆ ನೀಡುವಾಗ ತುರ್ತಾಗಿ ಆಗಮಿಸಿ, ಪೆÇಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಚಾರಗಳನ್ನು ಮನಗಂಡು ದಯವಿಟ್ಟು ಹಬ್ಬ ಹರಿದಿನಗಳ ಸಮಯದಲ್ಲಿ ಮಳಿಗೆಗಳನ್ನು ಮುಚ್ಚುವ ಸಮಯಾವಧಿಯನ್ನು ವಿಸ್ತರಿಸಿ ಕೊಡಬೇಕು ಹಾಗೂ ಸಾರ್ವಜನಿಕರಿಗೆ ಸಾಮಾನು, ಸಗಟುಗಳನ್ನು ತುಂಬಲು ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ಸ್ಥಳದಲ್ಲಿ ಕೆಲ ನಿಮಿಷ ಆಟೋವನ್ನು ನಿಲ್ಲಿಸಲು ಅನುವು ಮಾಡಿಕೊಟ್ಟು ಸಹಕರಿಸಬೇಕೆಂದು ಮನವಿ ಮಾಡಿದರು. ಸಂಘದ ನಿರ್ದೇಶಕ ಕೆ.ಹೆಚ್.ಮೊಹಮ್ಮದ್ ರಾಫಿ ಮಾತನಾಡಿ, ಪುರಸಭೆ ವ್ಯಾಪ್ತಿಯ ಅಂಗಡಿ ಮಳಿಗೆಗಳ ಮುಚ್ಚುವಿಕೆಗೆ ಈಗಾಗಲೇ ಸಮಯವನ್ನು ನಿಗದಿ ಪಡಿಸಿರುತ್ತೀರಿ, ಆದರೆ ಹಬ್ಬ ಹರಿದಿನಗಳ ಸಮಯದಲ್ಲಿ ವ್ಯಾಪಾರ ವಹಿವಾಟು ನಡೆಸಲು ಹೆಚ್ಚುವರಿ ಸಮಯಾವಧಿಯು ಅವಶ್ಯಕವಾಗಿದೆ. ಎಂದಿನಂತೆ ನಿಗದಿತ ಸಮಯದಲ್ಲಿ ಮಳಿಗೆಗಳನ್ನು ಮುಚ್ಚುವುದರಿಂದ ಸಾರ್ವಜನಿಕರಿಗೂ ತೊಂದರೆಯಾಗುತ್ತಿರುವುದಾಗಿದೆ ಅಲ್ಲದೆ ಸಾಮಾನು ಸಗಟುಗಳನ್ನು ಖರೀದಿಸಿ ಸ್ವಂತ ವಾಹನವಿಲ್ಲದೆ ಇರುವವರು ಬಾಡಿಗೆ ಆಟೋದಲ್ಲಿ ಸಾಗಿಸುವುದು ಅನಿವಾರ್ಯವಾಗುತ್ತದೆ. ಸ್ಥಳದಲ್ಲಿ ನಿಲ್ಲಿಸಿ ಸಗಟುಗಳನ್ನು ತುಂಬಲು ಅನುವು ಮಾಡಿಕೊಟ್ಟಲ್ಲಿ ಬಡಬಗ್ಗರಿಗೆ ತುಂಬಾ ಉಪಕಾರವಾಗುತ್ತದೆ ಎಂದರು. ಮನವಿ ಸ್ವೀಕರಿಸಿ ಮಾತನಾಡಿದ ಡಿವೈಎಸ್‍ಪಿ ಮಹೇಶ್ ಕುಮಾರ್ ಅವರು, ಸಮಯ ಸಂದರ್ಭ ನೋಡಿಕೊಂಡು ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸಂಘದ ನಿರ್ದೇಶಕರುಗಳಾದ ಸುರೇಶ್ ಆರ್, ರಾಜೇಶ್ ಆರ್ ಶೇಟ್, ಶಶಿ ಕೆ.ಆರ್, ಹಾಗೂ ಎಂ.ಎಸ್ ಮೊಹಮ್ಮದ್ ಹನೀಫ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.