ನಾಪೋಕ್ಲು ಡಿ.10 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರತೀಯ ಸಂಬಾರ ಮಂಡಳಿ ಮಡಿಕೇರಿ ಹಾಗೂ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳ ಇದರ ಜಂಟಿ ಆಶ್ರಯದಲ್ಲಿ ಕಾಳುಮೆಣಸು ಹಾಗೂ ಏಲಕ್ಕಿ ಬೆಳೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಕೃಷಿಕರು ಆಗಿಂದಾಗ್ಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೃಷಿಯಲ್ಲಿ ಋಷಿಯಾಗಿ ಖುಷಿ ಕಂಡವರಿದ್ದಾರೆ. ಅಂದರೆ ಕೃಷಿಕರಿಗೆ ತಲ್ಲೀನತೆ ಅಗತ್ಯ ಎಂದರು. ಪಿಎಲ್‍ಡಿ ಬ್ಯಾಂಕ್ ನ ನಿರ್ದೇಶಕರಾದ ಭುವನೇಶ್ವರ ಎನ್ ವಿ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ ಉಪಾಧ್ಯಕ್ಷರಾದ ನಂಜಪ್ಪ ನಿಟ್ಟಿಮಲೆ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪಿ.ಎಂ.ಸಂಬಾರ ಮಂಡಳಿ ಅಧಿಕಾರಿಗಳಾದ ರಶ್ಮಿ ಯವರು ಹಾಗೂ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಲೋಕೇಶ್ ಹೊದ್ದೆಟ್ಟಿ ರವರು ಉಪಸ್ಥಿತರಿದ್ದರು. ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಅಪ್ಪಂಗಳದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಅಂಕೆ ಗೌಡರವರು ಏಲಕ್ಕಿ ಮತ್ತು ಕಾಳುಮೆಣಸು ವಿಚಾರವಾಗಿ ರೈತ ಸದಸ್ಯರುಗಳಿಗೆ ಸುದೀರ್ಘವಾದ ಮಾಹಿತಿಯನ್ನು ನೀಡಿದರು ಕಾರ್ಯಕ್ರಮದ ಪ್ರಾರಂಭದಲ್ಲಿ ಸಂಸ್ಥೆಯ ಸಿಬ್ಬಂದಿಯವರಾದ ರವಿಪ್ರಕಾಶ್ ರವರು ಸರ್ವರನ್ನು ಸ್ವಾಗತಿಸಿದರು. ಸಹ ಭೋಜನದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ವರದಿ : ದುಗ್ಗಳ ಸದಾನಂದ.











