ಮಡಿಕೇರಿ ಡಿ.10 NEWS DESK : ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯನ್ನು 2015 ರಲ್ಲಿ ಲಾಭರಹಿತ ಸಂಸ್ಥೆಯಾಗಿ, ಬೆಂಗಳೂರಿನ ಕನಕಪುರ ರಸ್ತೆಯ ರವುಗೋಡ್ಲು ಗ್ರಾಮದಲ್ಲಿ ಸ್ಥಾಪಿಸಲಾಗಿದೆ. ಈ ಸಂಸ್ಥೆಗೆ ಭಾರತದ ಸರ್ಕಾರದ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆಯು (ಡಿಎಸ್‍ಐಆರ್) ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆ (ಎಸ್‍ಐಆರ್‍ಒ) ಎಂದು ಮಾನ್ಯತೆಯನ್ನು ನೀಡಿದೆ. ಪ್ರಯೋಗಾ ಸಂಸ್ಥೆಯು ವಿಜ್ಞಾನ ಕಲಿಕೆ ಮತ್ತು ಅಧ್ಯಾಪನವನ್ನು ಪ್ರಯೋಗಾತ್ಮಕವಾಗಿ ಕಲಿಯಲು ಉತ್ತೇಜಿಸುವ ಹಲವಾರು ವಿಜ್ಞಾನ ಶಿಕ್ಷಣ ಮತ್ತು ಪ್ರೋತ್ಸಾಹಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂತಹವುಗಳಲ್ಲೊಂದು ಅನ್ವೇಷಣಾ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವನ್ನು 2021ರಲ್ಲಿ ಪ್ರಾರಂಭಿಸಿದ್ದು, ಪ್ರೌಢಶಾಲೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಲ್ಲಿ (ತರಗತಿಗಳು 9–12) ವೈಜ್ಞಾನಿಕ ಅನ್ವೇಷಣೆ ಮತ್ತು ಅನುಭವಾಧಾರಿತ ಕಲಿಕೆಯನ್ನು ಉತ್ತೇಜಿಸುವ ಮಹತ್ವಾಕಾಂಕ್ಷಿ ಉಪಕ್ರಮವಾಗಿದೆ. ಈ ಕಾರ್ಯಕ್ರಮಕ್ಕೆ ಅರ್ಹ ವಿದ್ಯಾರ್ಥಿಗಳಿಂದ 2026 ರ ಶೈಕ್ಷಣಿಕ ವರ್ಷಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ, 15 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.










