ಬೆಳಗಾವಿ ಡಿ.11 NEWS DESK : ಬೆಳಗಾವಿ ಜಿಲ್ಲಾಡಳಿತ ಹಾಗೂ ಬೆಳಗಾವಿ ಲೋಕೋಪಯೋಗಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲಿ ನಿರ್ಮಿಸಿರುವ, ಉದ್ಯಾನವನ ಹಾಗೂ ಕಾರಂಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ , ಸಚಿವರುಗಳಾದ ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ ಸುಧಾಕರ್, ಡಾ.ಹೆಚ್.ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹಮದ್, ಶಾಸಕರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.











