
ನಾಪೋಕ್ಲು ಡಿ.11 NEWS DESK : ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದ ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪಾಲ್ಗೊಂಡಿದ್ದ ಏಳನೇ ತರಗತಿ ವಿದ್ಯಾರ್ಥಿ ಜಹೀರ್ ಟಿ.ಎ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಿದ್ದಾರೆ.
ವರದಿ : ದುಗ್ಗಳ ಸದಾನಂದ.









