ನಾಪೋಕ್ಲು ಡಿ.11 NEWS DESK : ವಲಯ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಿದಿಲಾಜ್ ಸಾಧನೆ ಮಾಡಿದ್ದಾನೆ. ವಲಯ ಮಟ್ಟದ ದೇಶಭಕ್ತಿ ಗೀತೆಯಲ್ಲಿ ಪ್ರಥಮ, ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಈತನ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕವೃಂದ ಮೆಚ್ಚುಗೆ ವ್ಯಕ್ತಪಡಿಸಿದೆ.











