Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಧ್ಯಮದ ಹೆಸರು ದುರ್ಬಳಕೆ : ಕ್ರಮಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಧ್ಯಮದ ಹೆಸರು ದುರ್ಬಳಕೆ : ಕ್ರಮಕ್ಕೆ ಆಗ್ರಹ*

ಡಿಸೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.12 NEWS DESK : ಪತ್ರಕರ್ತರಲ್ಲದ ಕೆಲವರು ತಮ್ಮ ವಾಹನಗಳಲ್ಲಿ ‘ಮೀಡಿಯಾ-ಪ್ರೆಸ್’ ಫಲಕ ಅಳವಡಿಸಿಕೊಂಡು ಮಾಧ್ಯಮದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಲಿಖಿತ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದ ನಿಯೋಗ ಎಸ್.ಪಿ.ಯನ್ನು ಭೇಟಿಯಾಗಿ, ಕೊಡಗು ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ವೃತ್ತಿ ಮಾಡದಿರುವವರು ಕೂಡ ಪ್ರೆಸ್ ಹಾಗೂ ಮೀಡಿಯಾ ಸ್ಟಿಕ್ಕರ್‍ಗಳನ್ನು ವಾಹನದಲ್ಲಿ ಅಂಟಿಸಿಕೊಂಡು ಪತ್ರಕರ್ತರೆಂದು ಬಿಂಬಿಸಿಕೊಳ್ಳುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ. ಇದರಿಂದ ನೈಜ ಪತ್ರಕರ್ತರು ಹಾಗೂ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪತ್ರಿಕೆ ಹಾಗೂ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ಗುರುತಿನ ಚೀಟಿ ಅಥವಾ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗುರುತಿನ ಚೀಟಿ ಹೊಂದಿರುವವರನ್ನು ಹೊರತುಪಡಿಸಿ ವಾಹನಗಳಲ್ಲಿ ‘ಪ್ರೆಸ್-ಮೀಡಿಯಾ’ ಎಂಬ ಸ್ಟಿಕ್ಕರ್ ಅಂಟಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿತು. ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಪೆÇಲೀಸರು ವಾಹನ ತಪಾಸಣೆ ಸಂದರ್ಭ ಮೀಡಿಯಾ ಸ್ಟಿಕ್ಕರ್ ಅಳವಡಿಸಿಕೊಂಡ ವ್ಯಕ್ತಿಯ ವೃತ್ತಿ ಸಂಬಂಧಿತ ಗುರುತಿನ ಚೀಟಿಯನ್ನು ಪರಿಶೀಲಿಸಬೇಕು. ಪತ್ರಿಕಾ ವಿತರಕರು ತಮ್ಮ ಕಾರ್ಯಾವಧಿಯಲ್ಲಿ ತಾತ್ಕಾಲಿಕ ಬೋರ್ಡ್ ಅಳವಡಿಸಿಕೊಂಡು ಬಳಿಕ ಅದನ್ನು ತೆರವುಗೊಳಿಸಬೇಕು. ಪೆÇಲೀಸ್ ಇಲಾಖೆ ಈ ಕುರಿತು ತಕ್ಷಣ ಕ್ರಮಕೈಗೊಂಡು ಪತ್ರಕರ್ತರಲ್ಲದೆ ಮಾಧ್ಯಮದ ಹೆಸರನ್ನು ದುರ್ಬಳಕೆ ಮಾಡುತ್ತಿರುವವರನ್ನು ಪತ್ತೆಹಚ್ಚಿ ಕಾನೂನಾತ್ಮಕ ಕ್ರಮ ಕೈಗೊಂಡು ಸಹಕರಿಸಬೇಕು ಎಂದು ನಿಯೋಗ ಮನವಿ ಮಾಡಿತು. :: ಕ್ರಮದ ಭರವಸೆ :: ಸಂಘದ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾದ್ಯಂತ ಈ ಸಂಬಂಧ ವಾಹನ ತಪಾಸಣೆ ನಡೆಸಲು ಕ್ರಮವಹಿಸಲಾಗುವುದು. ಆದರೆ, ಈ ಸಂದರ್ಭ ನೈಜ ಪತ್ರಕರ್ತರು ಇಲಾಖೆಯೊಂದಿಗೆ ಕೈ ಜೋಡಿಸಬೇಕು. ವಾಹನಗಳ ಪರಿಶೀಲನೆ ಸಂದರ್ಭ ವಾಗ್ವಾದ ಮಾಡದೆ ಗುರುತಿನ ಚೀಟಿ ನೀಡಿ ಸಹಕರಿಸಬೇಕು. ಪತ್ರಕರ್ತರಲ್ಲದವರು ಮೀಡಿಯಾ-ಪ್ರೆಸ್ ಸ್ಟಿಕ್ಕರ್ ಅಂಟಿಸಿಕೊಂಡಿದ್ದಲ್ಲಿ ದಂಡ ವಿಧಿಸಿ ಕ್ರಮಕೈಗೊಳ್ಳಲಾಗುವುದು. ಪತ್ರಕರ್ತರು ಸಂಚಾರಿ ನಿಯಮವನ್ನು ಚಾಚು ತಪ್ಪದೆ ಪಾಲಿಸಬೇಕು ಡಿ. 13 ರಿಂದಲೇ ಜಿಲ್ಲಾದ್ಯಂತ ತಪಾಸಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಭೇಟಿ ಸಂದರ್ಭ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಖಜಾಂಚಿ ಸುನಿಲ್ ಪೊನ್ನೇಟಿ, ಉಪಾಧ್ಯಕ್ಷ ನವೀನ್ ಸುವರ್ಣ, ಕಾರ್ಯದರ್ಶಿ ಮಲ್ಲಿಕಾರ್ಜುನ್, ನಿರ್ದೇಶಕರಾದ ಗೋಪಾಲ್ ಸೋಮಯ್ಯ, ಚಿತನ್ ಕುಮಾರ್, ಶಿವಕುಮಾರ್, ಅಬ್ದುಲ್ಲಾ, ಸದಸ್ಯರಾದ ಮಂಜು ಸುವರ್ಣ, ಲೋಹಿತ್ ಮಾಗಲುಮನೆ ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.