ನಾಪೋಕ್ಲು ಡಿ.12 NEWS DESK : ಬಲಮುರಿ ಗ್ರಾಮದ ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಕಟ್ರತನ ಲೋಕನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಮುಖ್ಯ ಅತಿಥಿಯಾಗಿ ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕರು, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೊಟ್ಟಕೇರಿಯನ ದಮೇಂದ್ರ, ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ಪೂನ್ನಚ್ಚನ ವೃಂಧಾ ಹಾಗೂ ಎಂ.ಬಿ.ಎ.ಸ್ನಾತಕೋತರ ಪದವಿಯಲ್ಲಿ ಅತ್ಯುತ್ತಮ ಇಂಟರ್ನಶಿಫ್ ಪ್ರಶಸ್ತಿ ಪಡೆದ ಕೋಟ್ಟಕೇರಿಯನ ಮೋನಿಕಾ ಅವರುಗಳನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಹಿರಿಯ ವಕೀಲರಾದ ಕೊಟ್ಟಕೇರಿಯನ ದಯಾನಂದ ಸಂಘದ ಸಮಗ್ರ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆಯನ್ನು ನೀಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಯರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿ ಮಡಕೆ ಒಡೆಯುವುದು ಹೀಗೆ ವಿವಿಧ ಕ್ರೀಡೆಗಳಲನ್ನು ಆಯೋಜಿಸಿ ವಿಜೇತರಾದವರಿಗೆ ಗಣ್ಯರು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಪೊನ್ನಚ್ಚನ ರೋಹಿತ್ ವರದಿ ವಾಚಿಸಿದರು. ಪೊನ್ನಚ್ಚನ ಹರೀಶ್ ಸ್ವಾಗತಿಸಿದರು. ಪೊನ್ನಚ್ಚನ ಡಯಾನ ವಂದಿಸಿದರು.
ವರದಿ : ದುಗ್ಗಳ ಸದಾನಂದ.











