ವಿರಾಜಪೇಟೆ ಡಿ.12 NEWS DESK : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ. ಘಟಕ, ಮಾನವ ಹಕ್ಕುಗಳ ಸಮಿತಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ದಿನದ ಅಂಗವಾಗಿ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ.ಯವರು, ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಪ್ರೊ.ಬಸವರಾಜು ಕೆ, ಮಾನವ ಹಕ್ಕುಗಳ ಸಮಿತಿಯ ಸಂಚಾಲಕರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಿವ್ಯ ಎಂ.ಬಿ., ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಮಧುರಾ ವಿ.ಆರ್, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಗ್ರಂಥಾಲಯ ವಿಭಾಗದ ಡಾ.ರೂಪಾ, ಇ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಮಯಂತಿ ಪಿ.ಟಿ.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.











