ಮಡಿಕೇರಿ ಡಿ.12 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಮುಕ್ತ ಯುವ ಅಭಿಯಾನದ ಸಮಾರೋಪ ಸಮಾರಂಭವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎಲ್.ಶ್ರೀನಿವಾಸ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಥಮ ದರ್ಜೆ ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ ವಿಷಯದ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಡಾ.ರಾಘವ್ ಬಿ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಎಫ್‍ಎಂಸಿ ಕಾಲೇಜು ಎನ್‍ಎಸ್‍ಎಸ್ ಘಟಕಾಧಿಕಾರಿ ಡಾ.ಶೈಲಾ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಪುನೀತ ರಾಣಿ ಎಸ್. ಹಾಗೂ ಎನ್.ಎಸ್.ಎಸ್ ಅಧಿಕಾರಿ ಅಲೋಕ್ ಬಿಜೈ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಹಾಗೂ ಎಫ್.ಎಂ.ಸಿ. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಾಥ್ ನಿರೂಪಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತರಾದ ಆರ್.ಮಂಜುನಾಥ್ ಸ್ವಾಗತಿಸಿದರು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ವಂದಿಸಿದರು.











