Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*
  • *ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*
  • *ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*
  • *ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*
  • *ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು*
  • *ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಗಮನ ಸೆಳೆದ ವಿಜ್ಞಾನ ವಸ್ತು ಪ್ರದರ್ಶನ : ವಿದ್ಯಾರ್ಥಿಗಳು ವಿಜ್ಞಾನಿಗಳ ಆವಿಷ್ಕಾರದ ಬಗ್ಗೆ ಜ್ಞಾನ ಬೆಳೆಸಿಕೊಳ್ಳಿ : ಬಿಇಓ ಕೃಷ್ಣಪ್ಪ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಐಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಗಮನ ಸೆಳೆದ ವಿಜ್ಞಾನ ವಸ್ತು ಪ್ರದರ್ಶನ : ವಿದ್ಯಾರ್ಥಿಗಳು ವಿಜ್ಞಾನಿಗಳ ಆವಿಷ್ಕಾರದ ಬಗ್ಗೆ ಜ್ಞಾನ ಬೆಳೆಸಿಕೊಳ್ಳಿ : ಬಿಇಓ ಕೃಷ್ಣಪ್ಪ ಸಲಹೆ*

ಡಿಸೆಂಬರ್ 12, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.12 NEWS DESK : ಮಕ್ಕಳಿಗೆ ವಿಜ್ಞಾನದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆ ಬಹಳ ಮುಖ್ಯವಾಗಿದ್ದು, ಶಿಕ್ಷಕರು ವಿಜ್ಞಾನದ ಬಗ್ಗೆ ಮಕ್ಕಳಿಗೆ ಹೆಚ್ಚಿನ ತಿಳುವಳಿಕೆ ನೀಡುವ ಮೂಲಕ ಅವರಲ್ಲಿ ವೈಜ್ಞಾನಿಕ‌ ಮನೋಭಾವ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಲು ವಿಶೇಷ ಗಮನ ಹರಿಸಬೇಕು. ಇದಕ್ಕಾಗಿ ಶಾಲೆಗಳಲ್ಲಿ ಶಿಕ್ಷಕರು ತಮ್ಮ ಬೋಧನೆಯಲ್ಲಿ ಪ್ರಾಯೋಗಿಕ ಸಲಕರಣೆ ಬಳಸುವ ಮೂಲಕ ಅವರಲ್ಲಿ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ‌ಆಸಕ್ತಿ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಸಲಹೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿನ ರಾಷ್ಟ್ರೀಯ‌ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಐಗೂರು
ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನಿಗಳ ಆವಿಷ್ಕಾರದ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡು ತಮ್ಮನ್ನು ಸಂಶೋಧನಾ ಪ್ರವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆಗಳಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕಲಿಕೆಯ ಕುತೂಹಲ
ವನ್ನು ಹುಟ್ಟುಹಾಕಿ ಪ್ರಾಯೋಗಿಕ ಕಲಿಕೆಯನ್ನು ಪ್ರೇರೇಪಿಸಿ ಬೆಳೆಸುವ ಮತ್ತು ವೈಜ್ಞಾನಿಕ ಚಿಂತನೆಯನ್ನು ಉತ್ತೇಜಿಸುವ ಪ್ರಮುಖ ಚಟುವಟಿಕೆಗಳಾಗಿ ರೂಪುಗೊಳ್ಳುತ್ತವೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಹೇಳಿದರು. ವಿದ್ಯಾರ್ಥಿಗಳಿಗೆ ವಿಜ್ಞಾನದ ಪ್ರಾಯೋಗಿಕ ಕಲಿಕೆ ಮುಖ್ಯ.ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರದಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಧ್ವನಿ ಎತ್ತಿ ಸಮಾಜದಲ್ಲಿ ವೈಜ್ಞಾರಿಕತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು. ಮಕ್ಕಳ ವಿಜ್ಞಾನ ಪ್ರದರ್ಶನಗಳು ಕೇವಲ ಯೋಜನೆಗಳ ಪ್ರದರ್ಶನಗಳಲ್ಲ; ಅವುಗಳು ಹೊಸ ಹೊಸ ನಾವೀನ್ಯತೆ, ಪ್ರಯೋಗಶೀಲತೆ ಮತ್ತು ನೈಜ-ಪ್ರಪಂಚದ ಸನ್ನಿವೇಶಗಳಲ್ಲಿ ವೈಜ್ಞಾನಿಕ ತತ್ವಗಳ ಅನ್ವಯವನ್ನು ಪ್ರೋತ್ಸಾಹಿಸುವ ವೇದಿಕೆಗಳಾಗಿ ರೂಪುಗೊಂಡಿವೆ ಎಂದರು. ರಾಷ್ಟ್ರೀಯ‌ ಆವಿಷ್ಕಾರದ ಮುಖ್ಯ ಉದ್ದೇಶ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷಕರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಬಳಸಿ ಕಲಿಕೋಪಕರಣ ಬಳಸಿದರೆ ಮಕ್ಕಳು ಹೆಚ್ಚು ಆಸಕ್ತಿ ವಹಿಸಿ ಓದುತ್ತಾರೆ. ಅವರಲ್ಲಿ ಸೃಜನಾತ್ಮಕ ಚಿಂತನಶೀಲ ವೈಜ್ಞಾನಿಕ ಮನೋಭಾವ ಬೆಳೆಸಲು ಇಂತಹ ವಸ್ತು ಪ್ರದರ್ಶನಗಳು ಸಹಕಾರಿ ಎಂದರು. ವಿದ್ಯಾರ್ಥಿಗಳು ವಿಜ್ಞಾನಿಗಳ‌ ಸಂಶೋಧನೆ ಮತ್ತು ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡರೆ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಇಂತಹ ವಿಜ್ಞಾನ ಆವಿಷ್ಕಾರಗಳ ಪ್ರಾಯೋಗಿಕ ಪ್ರದರ್ಶನಗಳು ಮಕ್ಕಳಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚಿನ ಪ್ರೇರೇಪಣೆ ನೀಡುತ್ತವೆ ಎಂದರು.
ಈ ವಸ್ತು ಪ್ರದರ್ಶನದಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳು ಉತ್ತಮ ವಿಜ್ಞಾನ ಮಾದರಿ ಹಾಗೂ ಪ್ರಾತ್ಯಕ್ಷಿಕೆಗಳನ್ನು ಉತ್ಯಮವಾಗಿ ಮಾಡಿರುವುದನ್ನು ಟಿ.ಜಿ.ಪ್ರೇಮಕುಮಾರ್ ಪ್ರಶಂಸಿದರು. ಮಕ್ಕಳ ವಿಜ್ಞಾನ ಮಾದರಿ ಪ್ರದರ್ಶನದ ಬಗ್ಗೆ ಸಂತಸ ವ್ಯಕ್ತಪಡಿಸಿ ಮಾತನಾಡಿದ ಜಿಲ್ಲಾ ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ.ಮುರಳೀಧರ್, ವಿಜ್ಞಾನ ವಿಷಯವು ನಮ್ಮ ದಿನನಿತ್ಯದ ಅನುಭವಗಳನ್ನು ಪರೀಕ್ಷಿಸಿ ವೀಕ್ಷಿಸುವ ಅವಕಾಶ ನೀಡುತ್ತದೆ. ಇದಕ್ಕೆ ಪೂರಕವಾಗಿ ಪರಿಸರದಲ್ಲಿ ಇರುವ ಸಂಬಂಧಗಳಿಗೆ ಮತ್ತು ಚಟುವಟಿಕೆಗಳಿಗೆ ಯೋಜನಾ ಕಾರ್ಯ ರೂಪವಾಗಿ ಮಕ್ಕಳ ಮುಂದೆ ಪ್ರದರ್ಶಿಸಿ ಅನ್ವೇಷಣೆಯ ಕಲಿಕೆಗೆ ಜ್ಞಾನ ಕಟ್ಟಿಕೊಟ್ಟರೆ ಅವರು ಭವಿಷ್ಯದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದರು. ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್ ಮಾತನಾಡಿ, ಇಂತಹ ವಿಜ್ಞಾನ ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಗೆ ಪ್ರೇರೇಣೆ ನೀಡುವುದರೊಂದಿಗೆ ಅವರಲ್ಲಿ ಭವಿಷ್ಯದಲ್ಲಿ ವೈಜ್ಞಾನಿಕ ಅನ್ವೇಷಣೆ ಕೈಗೊಳ್ಳಲು ಸಹಕಾರಿಯಾಗಿವೆ ಎಂದರು. ಶಾಲಾ ಮುಖ್ಯ ಶಿಕ್ಷಕ ಎಂ.ಎಂ. ಯಶವಂತ್ ಕುಮಾರ್, ಮಾತನಾಡಿ, ಈ ವಸ್ತು ಪ್ರದರ್ಶನವು ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ. ಮಕ್ಕಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನ ಶಿಕ್ಷಕಿ ಎಸ್ ಎಸ್ ರಂಜಿನಿ, ಈ ವಸ್ತು ಪ್ರದರ್ಶನದಲ್ಲಿ ಮಕ್ಕಳೇ ವಿವಿಧ ಯೋಜನಾ ಮಾದರಿಗಳನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿದ್ದು, ಇದು ಮಕ್ಕಳಲ್ಲಿ ವಿಜ್ಞಾನ ಕಲಿಕೆಗೆ ಸಹಕಾರಿಯಾಗಿದೆ ಎಂದರು. ಎಸ್ ಡಿ ಎಂ ಸಿ ಅಧ್ಯಕ್ಷ ಬಿ.ಎನ್. ವಸಂತ್ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿ ಎಂ ಸಿ ಸದಸ್ಯ ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕ ಎಚ್.ಬಿ.ಕೃಷ್ಣಪ್ಪ, ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ.ಟಿ.ಸರಳಕುಮಾರಿ, ಕಿರಗಂದೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ರಶ್ಮಿ ಸೇರಿದಂತೆ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.24 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*

ಏಪ್ರಿಲ್ 24, 2026

*ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*

ಏಪ್ರಿಲ್ 24, 2026

*ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*

ಏಪ್ರಿಲ್ 24, 2026

*ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 24, 2026

*ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು*

ಏಪ್ರಿಲ್ 24, 2026

*ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*

ಏಪ್ರಿಲ್ 24, 2026

*ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*

ಏಪ್ರಿಲ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.