ಮಡಿಕೇರಿ ಡಿ.13 NEWS DESK : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಕ್ರೀಡಾ ದಿನಾಚರಣೆ ಸಂಭ್ರಮದಿಂದ ನಡೆಯಿತು. ಶಾಲಾ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಪೊನ್ನಚನ ಶ್ರೀನಿವಾಸ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಕುಟ್ಟೆಟ್ಟಿರ ಕುಂಞಪ್ಪ, ಮೊಟ್ಟೆಯಂಡ ಸುಗು ತಮ್ಮಯ್ಯ, ಶಾಲಾ ವ್ಯವಸ್ಥಾಪಕರಾದ ನಾಟೋಳಂಡ ವಿಜು, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ, ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಕೆ.ಎಸ್.ರಾಮಾಮೂರ್ತಿ ಹಾಜರಿದ್ದರು. ವಿದ್ಯಾರ್ಥಿಗಳಿಂದ ನೃತ್ಯ, ಯೋಗ ಕರಾಟೆ, ಹಾಡು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಮುಖ್ಯ ಅತಿಥಿಗಳಿಂದ ಬಹುಮಾನ ವಿತರಣೆ ನಡೆಯಿತು. ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಕೆ.ಬಿ.ಸ್ವರೂಪ್ ನಿರೂಪಿಸಿದರು. ಇಂಗ್ಲೀಷ್ ಶಿಕ್ಷಕರಾದ ಪಿ.ಎಲ್.ಲೋಹಿತ್ ಸ್ವಾಗತಿಸಿದರು. ಗಣಿತ ಶಿಕ್ಷಕಿ ರಾಜೇಶ್ವರಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿ, ಚೈತ್ರ ವಂದಿಸಿದರು. ಕ್ರೀಡಾಕೂಟದ ತೀರ್ಪುಗಾರರಾಗಿ ಮನೋಜ್ ಕುಮಾರ್, ಸಜನಿ ಎ. ಟಿ, ಬೃಂದಾ ಕವನ್, ಸಂಧ್ಯಾ ಬಿ.ಎಸ್, ಅನಿಲ್ ಯು. ಟಿ, ಸೀಮಾ ಗಣಪತಿ ಪಾಲ್ಗೊಂದಿದ್ದರು.










