
ಮಡಿಕೇರಿ ಡಿ.13 NEWS DESK : ಮತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ.15ರಿಂದ ಜ.15ರವರೆಗೆ “ಗ್ಲೋಫೆಸ್ಟ್” ವಜ್ರಾಭರಣಗಳ ವಾರ್ಷಿಕ ಮಹೋತ್ಸವವನ್ನು ಆಯೋಜಿಸಲಾಗಿದೆ. ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ರೂ.7000 ವರೆಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವೈವಿಧ್ಯಮಯ ವಜ್ರಾಭರಣಗಳ ವಿನೂತನ ಸಂಗ್ರಹವಿದ್ದು, ವಜ್ರಾಭರಣಗಳು ದುಬಾರಿ ಎಂದೇ ಭಾವನೆಯಲ್ಲಿರುವ ಜನರಿಗೆ ಕೈಗೆಟಕುವ ದರದಲ್ಲೂ ವಜ್ರಾಭರಣಗಳು ಲಭ್ಯವಿದೆ. ರೂ.3500 ರಿಂದ ವಜ್ರಾಭರಣದ ಬೆಲೆಗಳು ಪ್ರಾರಂಭವಾಗುತ್ತದೆ. ಗ್ಲೋ ವಜ್ರಾಭರಣಗಳು ಅಂತರಾಷ್ಟ್ರೀಯ ಪ್ರಯೋಗಾಲಯದಿಂದ ಪ್ರಮಾಣಿಕರಿಸಲ್ಪಟ್ಟ, ಉತ್ಕೃಷ್ಟ ಶ್ರೇಣಿಯ ಮೂಗುತಿ, ಪೆಂಡೆಂಟ್, ಉಂಗುರ, ಕಿವಿಯೋಲೆ ನೆಕ್ಲೇಸ್, ಬಳೆಗಳ ವಿವಿಧ ವಿನ್ಯಾಸಗಳ ಅಮೋಘ ಸಂಗ್ರಹವಿದೆ. ನುರಿತ ತಜ್ಞರಿಂದ ವಜ್ರಾಭರಣಗಳ ಬಗ್ಗೆ ಸಂಪೂರ್ಣ ಮಾಹಿತಿ, ಪ್ರತಿಷ್ಠಿತ ಪ್ರಮಾಣೀಕೃತ ಏಜೆನ್ಸಿಗಳಿಂದ ಧೃಡೀಕರಣಗೊಂಡ ವಜ್ರಾಭರಣಗಳ ಶ್ರೇಣಿ, ಪ್ರಮಾಣೀಕೃತ EF ಬಣ್ಣದ ಹಳೆಯ ವಜ್ರಾಭರಣಗಳ ವಿನಿಮಯ, ಮರುಖರೀದಿಯ ಗ್ಯಾರಂಟಿ, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳನ್ನು ತಮ್ಮದಾಗಿಸುವ ಸುವರ್ಣಾವಕಾಶವಿದೆ. ವಜ್ರದ ಆಭರಣಗಳು ತಮ್ಮ ಅಸಾಧಾರಣ ಸೌಂದರ್ಯ ಹಾಗೂ ದೀರ್ಘಕಾಲ ಬಾಳಿಕೆಯಿಂದ ಬಹಳ ಅಮೂಲ್ಯ ಆಭರಣಗಳು ಎಂದು ಪರಿಗಣಿಸಲ್ಪಟ್ಟಿವೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಸುಮಾರು 3,600ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಕಣ್ಮನ ಸೆಳೆಯುವ ವಜ್ರಾಭರಣಗಳ ಅಮೋಘ ಸಂಗ್ರಹವಿದ್ದು, ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ವಜ್ರಾಭರಣಗಳು ಸಂಗ್ರಹವಿದ್ದು, ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.










