
ಮಡಿಕೇರಿ ಡಿ.13 NEWS DESK : 2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಿರೋದ್ಯೋಗಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಉದ್ಯೋಗಿನಿ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಯಡಿ ಆರ್ಥಿಕ ನೆರವು ನೀಡಲು ಆರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಿದ್ದು, ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ ವಯೋಮಿತಿ 18 ರಿಂದ 55 ವರ್ಷದ ಮಿತಿಯೊಳಗಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಟ ರೂ.3 ಲಕ್ಷದವರೆಗೂ ಸಾಲ ನೀಡಲಾಗುವುದು. ಸಾಮಾನ್ಯ ವರ್ಗದ ಮಹಿಳೆಯರು, ವಿಧವೆ, ವಿಕಲಚೇತನ ಮಹಿಳೆ, ಸಂಕಷ್ಟದಲ್ಲಿರುವ ಮಹಿಳೆಯರಿಗೆ ರೂ.90 ಸಾವಿರವರೆಗೂ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಇವರಿಗೆ ರೂ. 1.50 ಲಕ್ಷ ವರೆಗೂ ಸಹಾಯಧನ ನೀಡಲಾಗುವುದು. ಧನಶ್ರೀ, ಚೇತನ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ 18 ರಿಂದ 60 ವರ್ಷ ವಯೋಮಿತಿಯೊಳಗಿರುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಯಾವುದಾದರು ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ರೂ.30 ಸಾವಿರ ಸಹಾಯಧನ ಸೌಲಭ್ಯ ಒದಗಿಸುವುದು. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವವರು ಸಂಸ್ಥೆಯಲ್ಲಿ ನೋಂದಣಿಯಾಗಿರಬೇಕು. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ರೂ. 200000 ಹಾಗೂ ಸಾಮಾನ್ಯ ಮಹಿಳೆಯರಿಗೆ ರೂ. 1.50 ಲಕ್ಷ ಗಳಿಗಿಂತ ಮೀರದ ವಾರ್ಷಿಕ ಆದಾಯವನ್ನು ಮಿತಗೊಳಿಸಲಾಗಿದೆ. ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬಿ.ಪಿ.ಎಲ್ ಕಾರ್ಡ್, ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಯೋಜನಾ ವರದಿಯನ್ನು ಬ್ಯಾಂಕಿನಿಂದ ಅನುಮತಿ ಪತ್ರವನ್ನು ಲಗತ್ತಿಸಬೇಕು. ವಿಧವೆ, ವಿಕಲಚೇತನರು ಹಾಗೂ ಸಂಕಷ್ಟಕ್ಕೊಳಗಾದ ಮಹಿಳೆಯರು ಪ್ರಮಾಣ ಪತ್ರವನ್ನು ಲಗತ್ತಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಕೊಡಗು ಜಿಲ್ಲೆ ಇವರನ್ನು ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ 08272-228010, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿ 08272-295087, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪೊನ್ನಂಪೇಟೆ 08274-201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.










