Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದ ಕನ್ನಡ ಭಾರತಿ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ : ಕಿರಣ್ ಜಿ.ಗೌರಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದ ಕನ್ನಡ ಭಾರತಿ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ : ಕಿರಣ್ ಜಿ.ಗೌರಯ್ಯ*

ಡಿಸೆಂಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.13 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಮಯ ಪ್ರಜ್ಞೆ ಹಾಗೂ ಉತ್ತಮ ಸಂಸ್ಕಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಕನ್ನಡ ಭಾರತಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಕಾಲೇಜು ಜೀವನವನ್ನು ಮೋಜು ಮಾಸ್ತಿಗಾಗಿ ಹಾಳುಮಾಡಿಕೊಳ್ಳಬಾರದು. ಇದೊಂದು ಗೋಲ್ಡನ್ ಲೈಫ್ ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿಯೊಂದಿಗೆ ಏಕಾಗ್ರತೆ ಹಾಗೂ ಶ್ರದ್ಧೆ ಅಧ್ಯಯನಶೀಲತೆ ಕೈಗೊಂಡು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪೋಷಕರು ಹಾಗೂ ಗುರುಹಿರಿಯರು ಗೌರವ ನೀಡುವುದರ ಜೊತೆಗೆ ಅವರ ಆಸೆ ಆಕಾಂಕ್ಷೆ ಹಾಗೂ ನಿರೀಕ್ಷೆಯಂತೆ ಉನ್ನತ ಸ್ಥಾನಮಾನಕ್ಕೆ ಹೋದಾಗ ಮಾತ್ರ ಪೋಷಕರು ಕಂಡ ಕನಸು ನನಸಾಗಿಸಲು ಸಾಧ್ಯ ಎಂದರು. ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ. ಪುಟ್ಟರಾಜು ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕೆ ಅವರಲ್ಲಿನ ಶಿಸ್ತು ಹಾಗೂ ಸಮಯ ಪಾಲನೆ ಮುಖ್ಯ ಪಾತ್ರ ವಹಿಸುತ್ತದೆ. ಪೋಷಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಸಮನ್ವಯತೆ ಅತಿ ಮುಖ್ಯ. ವಿದ್ಯಾರ್ಥಿಗಳು ಮೊಬೈಲ್ ಗಳಿಂದ ದೂರವಿದ್ದು, ಪಠ್ಯದತ್ತ ಹೆಚ್ಚು ಗಮನಕೊಡಬೇಕು ಎಂದು ಕರೆ ನೀಡಿದರು. ದೇಶಕ್ಕಾಗಿ ತ್ಯಾಗ, ಬಲಿದಾನ ಗೈದ ಮಹಾಪುರುಷರ ಆದರ್ಶಗಳು ವಿದ್ಯಾರ್ಥಿಗಳಲ್ಲಿ ಅರಳಬೇಕಿದೆ. ಹಾಗಾಗಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಒಲವು ತೋರಬೇಕು ಎಂದರು. ಉನ್ನತ ಶಿಕ್ಷಣ ಸಂಸ್ಥೆಗಳು ರಾಜ್ಯದಲ್ಲಿ ಸಾಕಷ್ಟಿದ್ದರೂ ಕೂಡ ನಮ್ಮ ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಕಡಿಮೆ ಇದೆ. ಕೊಡಗಿನಲ್ಲಿ ಉನ್ನತ ಶಿಕ್ಷಣ ಪಡೆದವರ ಸಂಖ್ಯೆಯೂ ಅತ್ಯಂತ ಕಡಿಮೆ ಇದೆ ಎಂದು ಡಾ.ಪುಟ್ಟರಾಜು ವಿಷಾದಿಸಿದರು. ಪದವಿ ಪೂರ್ವ ಕಾಲೇಜು ವಿಭಾಗದ ಪ್ರಾಂಶುಪಾಲ ಶಾಂತಕುಮಾರ್ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಮೈಸೂರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಬೈಲಕೊಪ್ಪದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಬಿ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಪ್ರಧಾನ್ ಗೌತಮ್ ವಿದ್ಯಾ ಟ್ರಸ್ಟ್ ಕಾರ್ಯದರ್ಶಿ ಬಿ.ರಾಮಕೃಷ್ಣಯ್ಯ, ಆಡಳಿತಾಧಿಕಾರಿ ಜೈವರ್ಧನ್, ಪದವಿ ಕಾಲೇಜು ವಿಭಾಗದ ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ, ಹಿರಿಯ ಉಪನ್ಯಾಸಕರಾದ ಡಾ.ನಾಗೇಂದ್ರ ಸ್ವಾಮಿ, ಸೌಮ್ಯ, ರಶ್ಮಿತಾ ಪಾಲ್ಗೊಂಡಿದ್ದರು. ಉಪನ್ಯಾಸಕಿ ವಿನೀತಾ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸಚಿನ್ ಗಾನ ಹಾಗೂ ಚೈತ್ರ ಪ್ರಾರ್ಥಿಸಿದರು. ರಶ್ಮಿ ನಿರೂಪಿಸಿದರು.ಸ್ಮಿತಾ ವಂದಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.