ಮಡಿಕೇರಿ ಡಿ.13 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾವಳಿಯನ್ನು ಡಿ.14 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಕ್ಲಬ್ ಪ್ರಧಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಿ.14 ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಪಂದ್ಯಾವಳಿಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ.ಮೇ.ಬಿ.ರಾಘವ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಶಾಲನಗರ ತಾಲ್ಲೂಕಿನ ಹೆರೂರು ಗ್ರಾಮದ ಉದ್ಯಮಿ ಮೋಹಿನಿ ಪ್ರಕಾಶ್, ಜಿಲ್ಲಾ ಹಿಂದು ಮಲಯಾಳಿ ಸಮಾಜದ ಸಲಹೆಗಾರ ಹಾಗೂ ಎಸ್‌ಎನ್‌ಡಿಪಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಟಿ.ಆರ್.ವಾಸುದೇವ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್‌ಕುಟ್ಟಪ್ಪ, ರಾಜ್ಯ ಸಮಿತಿ ಸದಸ್ಯೆ ಬಿ.ಆರ್.ಸವಿತಾ ರೈ, ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ, ಪಂದ್ಯಾವಳಿಯ ಸಂಚಾಲಕರಾದ ಲೋಕೇಶ್ ಕಾಟಕೇರಿ, ಶಿವ ಕಾಂತರಾಜು, ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸಂಜೆ 3.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷ ಪ್ರಸನ್ನ ಭಟ್, ಎಲ್‌ಐಸಿಯ ಮೋಹಿತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್‌ಕುಟ್ಟಪ್ಪ, ರಾಜ್ಯ ಸಮಿತಿ ಸದಸ್ಯೆ ಬಿ.ಆರ್.ಸವಿತಾ ರೈ, ಜಿಲ್ಲಾಧ್ಯಕ್ಷ ಬಾಚರಣಿಯಂಡ ಅನುಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಬಿ.ಜಿ.ಮಂಜು, ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್, ಸದಸ್ಯ ಜೈರಸ್ ಥಾಮಸ್ ಅಲೆಕ್ಸಾಂಡರ್, ಪಂದ್ಯಾವಳಿಯ ಸಂಚಾಲಕ ಅಕ್ಷಯ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.










