ಕುಶಾಲನಗರ ಡಿ.16 NEWS DESK : ಶಿಕ್ಷಣ ಮತ್ತು ಆರೋಗ್ಯ ಇವೆರಡು ದೇಶದ ಅಭಿವೃದ್ದಿಯಲ್ಲಿ ಮಹತ್ವ ಪಾತ್ರ ವಹಿಸುತ್ತವೆ ಎಂದು ಡಾ. ಜಮೀರ್‌ಅಹಮದ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜ್ಞಾನದಿಂದ ಮಾತ್ರ ವ್ಯಕ್ತಿವಿಕಸನ ಸಾಧ್ಯ, ಸಾಮಾಜಿಕ ಬದ್ಧತೆ ಮತ್ತು ಮಾನವೀಯತೆ ಮೌಲ್ಯಗಳನ್ನು, ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು. ಪ್ಯಾರಾಮೆಡಿಕಲ್‌ಕೋರ್ಸುಗಳಿಗೆ ಇತ್ತೀಚಿನ ದಿನಗಳಲ್ಲಿ ವಿಪುಲ ಉದ್ಯೋಗಅವಕಾಶಗಳಿವೆ ಎಂದು ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸಾಮಾಜಿಕ ಜಾಲತಾಣಗಳ ಸದ್ಭಳಕೆ ಅಗತ್ಯ ಹಾಗೂ ಅವಶ್ಯತೆಗಳಿಗೆ ಮಾತ್ರ ಬಳಸಿಕೊಳ್ಳುವಂತೆ ತಿಳಿಸಿದ ಅವರು ಉದ್ಯೋಗದಲ್ಲಿ ಆಮಿಷಗಳಿಗೆ ಬಲಿಯಾಗದೆ ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಕಿವಿ ಮಾತು ಹೇಳಿದರು. ಸಮಾರಂಭದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಅತಿಥಿ ಗಣ್ಯರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಅನಿಶಾ ಸ್ವಾಗತಿಸಿದರು, ವರ್ಷ ವಂದಿಸಿದರು, ಮಾನ್ಯ ಮೋಹನ್ ಕಾರ್ಯಕ್ರಮ ನಿರೂಪಿದರು. ಉಪನ್ಯಾಸಕರಾದ ಭವ್ಯಶ್ರೀ, ಶ್ರೀವಿದ್ಯಾ , ಲೀಲಾವತಿ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.











