ಮಡಿಕೇರಿ ಡಿ.16 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ವಿರಾಜಪೇಟೆ ತಾಲ್ಲೂಕು ಘಟಕದ ವತಿಯಿಂದ ಡಿ.17 ರಂದು ಶಾಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ನಿರ್ದೇಶನ ದಲ್ಲಿ, ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಸಹಕಾರದೊಂದಿಗೆ, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಮುಕ್ಕಾಟಿರ ಕಾವೇರಮ್ಮ ಕರುಂಬಯ್ಯ ಅವರ ಅಧ್ಯಕ್ಷತೆಯಲ್ಲಿ ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಂಡಿಗೆರೆ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿನೆರವಂಡ ಡ್ಯಾನಿ ಕುಶಾಲಪ್ಪ, ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಂ.ಎಂ.ಇಸ್ಮಾಯಿಲ್, ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಜಿ.ಸವಿತಾ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಹಾಗೂ ತಾಲ್ಲೂಕು ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಕಾರ್ಯದರ್ಶಿ ಡ್ಯಾನಿ ಕುಶಾಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











