ಮಡಿಕೇರಿ ಡಿ.17 NEWS DESK : ಕೊಡಗು ಜಿಲ್ಲೆಯ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ನಗರದ ಖಾಸಾಗಿ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಜರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಭೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೆಲವು ಸುತ್ತೋಲೆಗಳಿಂದ ಖಾಸಗಿ ಶಾಲೆಗಳಿಗೆ ಆಗುತಿರುವ ಅನಾನುಕೂಲದ ಬಗ್ಗೆ ಚರ್ಚಿಸಲಾಯಿತು. ಹಾಗೂ ಜಿಲ್ಲೆಯ ಶಾಸಕರ ಮುಖಾಂತರ ಖಾಸಗಿ ಶಾಲೆಗಳ ಎಲ್ಲಾ ಸಮಸ್ಯೆಗಳನ್ನು ಸರ್ಕಾರದ ಮೂಲಕ ಬಗೆ ಹರಿಸಿಕೊಳ್ಳಲು ತಿರ್ಮಾನಿಸಲಾಯಿತು. ಖಾಸಗಿ ಶಾಲೆಗಳ ನಿಯಮಾನುಸಾರ, ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಸರ್ಕಾರದೊಂದಿಗೆ ರಾಜ್ಯಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿರ್ಮಾನಿಸಲಾಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ತಿಮ್ಮಯ್ಯ ಕೋಟ್ರಂಗಡ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಣಿ ಮೊಹಮ್ಮದ್, ಪ್ರಧಾನ ಕಾರ್ಯದರ್ಶಿಯಾಗಿ ಲಿಕಿತ್ ದಾಮೋದರ್, ಕಾನೂನು ಸಲಹೆಗಾರರಾಗಿ ಎಂ.ಎಸ್.ಪೂವಯ್ಯ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಎನ್. ಡಿ.ವಿಜು, ಸಚಿನ್ ವಾಸುದೇವ್, ಧನ್ಯ ಸುಬ್ಬಯ್ಯ, ಟಿ.ವಿ.ರವಿ, ಬಿ.ಪಿ.ಬೋಪಣ್ಣ, ಎಂ.ನಿರನ್ ಉತ್ತಪ್ಪ, ಕೆ.ಎನ್.ರಶ್ಮಿ ದೀಪಾ, ಶ್ವೇತಾ ಚೆಂಗಪ್ಪ, ಕರೀನಾ ಆಯ್ಕೆಯಾದರು. ಒಕ್ಕೂಟದ ಉಪಾಧ್ಯಕ್ಷರಾದ ಯಂ.ಓ.ದಾಮೋದರ್, ಒಕ್ಕೂಟದ ಕಾನೂನು ಸಲಹೆಗಾರ ಎಂ.ಎಸ್.ಪೂವಯ್ಯ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ವಿದ್ಯಾಸಂಸ್ಥೆಗಳ ಸಂಸ್ಥಾಪಕರು ಹಾಜರಿದ್ದರು. ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ ಸ್ವಾಗತಿಸಿ, ವಂದಿಸಿದರು. ಒಕ್ಕೂಟದ ಅಧ್ಯಕ್ಷರಾದ ಜರುಗಣಪತಿ ಅವರು ಸತತ 9 ವರ್ಷಗಳ ಕಾಲ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದಕ್ಕೆ ಸಭೆಯಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.












