ಸೋಮವಾರಪೇಟೆ NEWS DESK ಡಿ.18 : ಐಗೂರು ಗ್ರಾಮದಲ್ಲಿ ಫೆ.9ರಂದು ಆಯೋಜಿಸಿರುವ 9ನೇ ಸೋಮವಾರಪೇಟೆ ತಾಲೂಕು ಸಮ್ಮೇಳನಕ್ಕೆ ಅಗತ್ಯ ಸಿದ್ಧತೆಗಳ ಕುರಿತು ವಿವಿಧ ಸಮಿತಿಯ ಪದಾಧಿಕಾರಿಗಳೊಂದಿಗೆ ಐಗೂರಿನ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಮ್ಮೇಳನದ ಅಧ್ಯಕ್ಷರ ಆಯ್ಕೆ, ಹೋಬಳಿ ಮಟ್ಟದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕುರಿತು ಸದಸ್ಯರುಗಳು ಸಲಹೆ ನೀಡಿದರು. ಸ್ಮರಣ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಹಣಕಾಸು ಸಮಿತಿಯ ಅಧ್ಯಕ್ಷ ಕೆ.ಪಿ.ರಾಯ್ ಅವರಿಗೆ ರಶೀದಿ ಪುಸ್ತಕಗಳನ್ನು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ.ವಿಜೇತ್ ಹಸ್ತಾಂತರಿಸಿದರು.
ಸಭೆಯ ಅಧ್ಯಕ್ಷತೆಯನ್ನು ವಿಜೇತ್ ವಹಿಸಿದ್ದರು. ಕಾರ್ಯದರ್ಶಿ ಜ್ಯೋತಿ ಅರುಣ್, ಖಜಾಂಚಿ ಕೆ.ಪಿ.ದಿನೇಶ್ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.










