ಕುಶಾಲನಗರ ಡಿ.19 NEWS DESK : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸ್ಥಾನೀಯ ಸಮಿತಿಯ ವಾರ್ಷಿಕ ಮಹಾಸಭೆ ಡಿ.21 ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಧ್ಯಾಹ್ನ 3 ಗಂಟೆಗೆ ಕುಶಾಲನಗರ ಗೌಡ ಸಮಾಜದ ಮುಂಭಾಗ ಇರುವ ಪಾಳ್ಯಂ ಎಮರಾಲ್ಡ್ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು. ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಟಿ.ಪಿ.ರಮೇಶ್ ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚೇಂಬರ್ ಜಿಲ್ಲಾ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಮತ್ತು ಸಂಘಟನಾ ಕಾರ್ಯದರ್ಶಿ ಟಿ.ಆರ್.ಶರವಣಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. ಈ ಸಂದರ್ಭ ಕುಶಾಲನಗರದಲ್ಲಿ ಚೇಂಬರ್ ಆರಂಭವಾಗಲು ಪ್ರಮುಖ ಕಾರಣಕರ್ತರಾದ ವಿ.ವಿ.ನಾಗೇಂದ್ರ ಹಾಗೂ ಸ್ಥಾಪಕ ಅಧ್ಯಕ್ಷರಾದ ಪಿ.ಪಿ.ಸತ್ಯನಾರಾಯಣ, ಸ್ಥಾಪಕ ಕಾರ್ಯದರ್ಶಿ ಬಿ.ಜಿ.ಅನಂತಶಯನ ಸೇರಿದಂತೆ ಇದುವರೆಗಿನ ಮಾಜಿ ಅಧ್ಯಕ್ಷರು ಮಾಜಿ ಕಾರ್ಯದರ್ಶಿಗಳನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಕುಶಾಲನಗರ ಚೇಂಬರ್ ಸದಸ್ಯರಾಗ ಬಯಸುವ ಉದ್ಯಮಿಗಳು ಮಹಾಸಭೆಗೆ ಹಾಜರಾಗಿ ಸದಸ್ಯತನ ಪಡೆಯಬಹುದು ಎಂದು ನಾಗೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಚೇಂಬರ್ ಸ್ಥಾಪಕ ಅಧ್ಯಕ್ಷರಾದ ಪಿ.ಪಿ.ಸತ್ಯನಾರಾಯಣ, ಕಾರ್ಯದರ್ಶಿ ಚಿತ್ರ ರಮೇಶ್, ನಿರ್ದೇಶಕರಾದ ಪೊನ್ನಚ್ಚನ ಎಂ.ಮೋಹನ್, ಕೆ.ಜೆ.ಸತೀಶ್ ಇದ್ದರು.











