ನಾಪೋಕ್ಲು ಡಿ.21 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಗೌಡ ವಿಕಾಸ ವೇದಿಕೆ ವತಿಯಿಂದ ಶಾಲಾ ಮಕ್ಕಳ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ-2025 ಅನ್ನು ಡಿ.25 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಸುದರ್ಶನ ವೃತ್ತದ ಬಳಿಯ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ ಕುಂದಲ್ಪಾಡಿ ವಹಿಸಲಿದ್ದಾ ಮುಖ್ಯ ಅತಿಥಿಗಳಾಗಿ ಅರೆಭಾಷೆ ಗೌಡ ವಿಕಾಸ ವೇದಿಕೆಯ ನಿರ್ದೇಶಕ ಪ್ರಹ್ಲಾದ್ ಪೊಕ್ಕೋಳಂಡ್ರ ಪಾಲ್ಗೊಳ್ಳಲಿದ್ದಾರೆ. ಅರೆಭಾಷೆ ಹಿರಿಯ ಸಾಹಿತಿ ಬೈತಡ್ಕ ಜಾನಕಿ ಬೆಳ್ಳಪ್ಪ, ಹಾಕತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತೆಕ್ಕಡೆ ಕುಮಾರಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮಾ ರಾಘವಯ್ಯ ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕಿ ಪುದಿಯನೆರವನ ರೇವತಿ ರಮೇಶ್ ಪಾಲ್ಗೊಳ್ಳಲಿದ್ದಾರೆ ಎಂದು ವಿಕಾಸ ವೇದಿಕೆಯ ನಿರ್ದೇಶಕ ಪ್ರಹ್ಲಾದ್ ಪೊಕ್ಕೋಳಂಡ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.










