ಮಡಿಕೇರಿ NEWS DESK ಡಿ.20 : ಪೊನ್ನಂಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣದಲ್ಲಿ ತಪ್ಪತಸ್ಥ ವ್ಯಕ್ತಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಈ ಪ್ರಕರಣದ ತನಿಖೆಯಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಡಿಕೇರಿಯ ಕವಾಯತು ಮೈದಾನದಲ್ಲಿ ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.











