ಮಡಿಕೇರಿ ಡಿ.20 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ- ಭಾಗಮಂಡಲ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ಅತಿ ಮಳೆಯಿಂದ ಹೊಂಡ ಗುಂಡಿಗಳಾಗಿದ್ದ ರಸ್ತೆಯ ಅಭಿವೃದ್ಧಿಗೆ ಭಕ್ತರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಅನುದಾನವನ್ನು ಒದಗಿಸಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಮತ್ತೊಂದೆಡೆ ವಿರಾಜಪೇಟೆ – ಮಾಕುಟ್ಟ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಶಾಸಕರ ಪ್ರಯತ್ನಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಳಿದಿರುವ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ.










