ಮಡಿಕೇರಿ ಡಿ.20 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆಯು ಡಿಸೆಂಬರ್, 29 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಡಿಸೆಂಬರ್, 29 ರಂದು ಬೆಳಗ್ಗೆ 10 ಗಂಟೆಗೆ ಗಣ್ಯರಿಂದ ಮೇಜರ್ ಮಂಗೇರಿರ ಮುತ್ತಣ್ಣ ವೃತ್ತದ ಪಕ್ಕದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಕೇಶವ ಕಾಮತ್, ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷರಾದ ಬಿ.ಜಿ.ಅನಂತಶಯನ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.










