


ಮಡಿಕೇರಿ ಡಿ.22 NEWS DESK : ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೊಲಿಯೋ ಕಾರ್ಯಕ್ರಮದಲ್ಲಿ ಇದುವರೆಗೆ ಒಟ್ಟು 34,736 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟಾರೆ ಶೇ.106.2 ಪಗತಿ ಸಾಧಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 31,100 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 105.7ರಷ್ಟು ನಗರ ಪ್ರದೇಶದಲ್ಲಿ ಒಟ್ಟು 3,636 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.111.0ರಷ್ಟು ಪ್ರಗತಿ ಸಾಧಿಸಲಾಗಿದೆ. :: ಮಡಿಕೇರಿ ತಾಲ್ಲೂಕು :: ಒಟ್ಟು 9,703 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.106.4 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 7,537 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 102.3 %ರಷ್ಟು ಹಾಗೂ ನಗರ ಪ್ರದೇಶದಲ್ಲಿ 2,166 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.123.10 %ರಷ್ಟು ಪ್ರಗತಿ ಸಾಧಿಸಲಾಗಿದೆ. :: ಸೋಮವಾರಪೇಟೆ ತಾಲ್ಲೂಕು :: ಒಟ್ಟು 11,991 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.111.50 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 11,667 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 110.90ರಷ್ಟು ನಗರ ಪ್ರದೇಶದಲ್ಲಿ 324 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.135.00 ರಷ್ಟು ಪ್ರಗತಿ ಸಾಧಿಸಲಾಗಿದೆ. :: ವಿರಾಜಪೇಟೆ ತಾಲ್ಲೂಕು :: ಒಟ್ಟು 13,042 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.101.70 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 11,896 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 103.0%ರಷ್ಟು ನಗರ ಪ್ರದೇಶದಲ್ಲಿ 1,146 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.89.80 ರಷ್ಟು ಪ್ರಗತಿ ಸಾಧಿಸಲಾಗಿದೆ.










