ಮಡಿಕೇರಿ ಡಿ.22 NEWS DESK : ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಅಂಗನವಾಡಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯರಾದ ಜಾನ್ಸನ್ ಪಿಂಟೋ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪಲ್ಸ್ ಪೋಲಿಯೊ ಲಸಿಕೆ ದಿನದಂದು ದೇಶಾದ್ಯಂತ ಲಕ್ಷಾಂತರ ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ. ಇದರಿಂದ ಪೋಲಿಯೊ ಪ್ರಕರಣಗಳ ಸಂಖ್ಯೆಯನ್ನು ತೀವ್ರವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.











